ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿಗೌಡ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿ, ಮತದಾರರಿಗೆ ವಿವಿಧ ರೀತಿಯ ಉಡುಗೊರೆಗಳನ್ನು ಹಂಚುತ್ತಿದ್ದಾರೆ ಎಂದು ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಆಗ್ರಹಿಸಿದೆ.
ಖಾಸಗಿ ಕೊರಿಯರ್ ಏಜೆನ್ಸಿಯ ಗೋದಾಮಿನಲ್ಲಿ ಈ ಉಡುಗೊರೆಗಳನ್ನು ಶೇಖರಿಸಿ ಇಡಲಾಗಿದೆ. ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸುವಂತೆ ನಿಯೋಗ ಒತ್ತಾಯಿಸಿದೆ. ನಿಯೋಗದಲ್ಲಿ ಶಾಸಕರಾದ ಎಸ್. ಸುರೇಶ್ ಕುಮಾರ್, ಸಿ.ಕೆ. ರಾಮಮೂರ್ತಿ, ಛಲವಾದಿ ನಾರಾಯಣಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.