ADVERTISEMENT

ಮೇಲ್ದರ್ಜೆಗೇರಿಸಿದ 150 ಸರ್ಕಾರಿ ಐಟಿಐಗಳನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 20 ಜೂನ್ 2022, 19:49 IST
Last Updated 20 ಜೂನ್ 2022, 19:49 IST
ಬೆಂಗಳೂರಿನಲ್ಲಿ `ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ ನೂತನ ಕ್ಯಾಂಪಸ್ಸನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜತೆ ಫೋಟೊ ತೆಗೆಸಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಸಿ.ಎನ್. ಅಶ್ವತ್ಥನಾರಾಯಣ, ವಿ.ಸುನೀಲ್‌ ಕುಮಾರ್, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸಪೂಜಾರಿ ಇದ್ದರು
ಬೆಂಗಳೂರಿನಲ್ಲಿ `ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯ’ದ ನೂತನ ಕ್ಯಾಂಪಸ್ಸನ್ನು ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳ ಜತೆ ಫೋಟೊ ತೆಗೆಸಿಕೊಂಡರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರಚಂದ್ ಗೆಹಲೋತ್, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಸಿ.ಎನ್. ಅಶ್ವತ್ಥನಾರಾಯಣ, ವಿ.ಸುನೀಲ್‌ ಕುಮಾರ್, ಬಿ. ಶ್ರೀರಾಮುಲು, ಕೋಟ ಶ್ರೀನಿವಾಸಪೂಜಾರಿ ಇದ್ದರು   

ಬೆಂಗಳೂರು: ಟಾಟಾ ಸಮೂಹದ ನೆರವಿನೊಂದಿಗೆ ಕರ್ನಾಟಕ ಸರ್ಕಾರವು ₹4,736 ಕೋಟಿ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಿರುವ 150 ಸರ್ಕಾರಿ ಐಟಿಐಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು.

ರಾಜ್ಯದ 150 ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಗಳನ್ನು ರಾಷ್ಟ್ರ ಮಟ್ಟದ ತಾಂತ್ರಿಕ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗಿದ್ದು, ಟಾಟಾ ಟೆಕ್ನಾಲಜೀಸ್‌ ಲಿಮಿಟೆಡ್‌ (ಟಿಟಿಎಲ್‌) ಮತ್ತು ಇತರ 20 ಕೈಗಾರಿಕಾ ಸಂಸ್ಥೆಗಳ ಸಹಯೋಗ ಇದಕ್ಕಿದೆ. ‘ಉದ್ಯೋಗ’ ಹೆಸರಿನ ಈ ವಿನೂತನ ಯೋಜನೆಯಡಿ ಜಾಗತಿಕ ಕೈಗಾರಿಕೆ, ಅಸೆಂಬ್ಲಿ ಲೈನುಗಳು ಮತ್ತು ಉದ್ಯೋಗಾವಕಾಶಗಳಿಗಾಗಿ ಅತ್ಯಾಧುನಿಕ ತಂತ್ರಜ್ಞಾನ ತರಬೇತಿ ನೀಡ
ಲಾಗುವುದು. ಇದರಿಂದ ರಾಜ್ಯದ 1.70 ಲಕ್ಷ ವಿದ್ಯಾರ್ಥಿಗಳಿಗೆ ಲಾಭವಾಗಲಿದೆ.

ಹರ್ಷಗೊಂಡ ಮೋದಿ: ಉನ್ನತೀಕರಿಸಿದ ಐಟಿಐಗಳ ಚಾಲನೆ ಗುಂಡಿಯನ್ನು ಒತ್ತುತ್ತಿದ್ದಂತೆಯೇ, ರಾಜ್ಯಾದ್ಯಂತ ಇರುವ ಐಟಿಐಗಳೆಲ್ಲ ಕ್ರಿಯಾಶೀಲವಾದುದನ್ನು ಕಂಡು ಪ್ರಧಾನಿ ಮೋದಿ ಹರ್ಷ ವ್ಯಕ್ತಪಡಿಸಿದರು.

ADVERTISEMENT

ಉದ್ಘಾಟನೆ ಮುಗಿಯುತ್ತಿದ್ದಂತೆ ನೇರವಾಗಿವಿದ್ಯಾರ್ಥಿಗಳ ಬಳಿ ತೆರಳಿದ ಮೋದಿ, ಕೆಲ ನಿಮಿಷಗಳನ್ನು ಅವರ ಜತೆ ಕಳೆದು ಶೈಕ್ಷಣಿಕ ಪ್ರಗತಿಯ ಬಗ್ಗೆ ವಿಚಾರಿಸಿದರು. ಈ ಕ್ಷಣವನ್ನು ಕ್ಯಾಮರಾಗಳು ಸೆರೆ ಹಿಡಿದವು. ಅದರಿಂದ ಸಮಾಧಾನಗೊಳ್ಳದ ಪ್ರಧಾನಿ, ‘ಅಲ್ಲಿರುವ ಮೆಟ್ಟಿಲ ಬಳಿಗೆ ನೀವೆಲ್ಲ ಬನ್ನಿ. ಅಲ್ಲಿ ಫೊಟೋ ಸೆಷನ್‌ ಆಗಲಿ’ ಎಂದು ಹೇಳಿದರು.

ಬಳಿಕ ಅವರು ಉನ್ನತೀಕರಿಸಿರುವ ಐಟಿಐ ಮಾದರಿಯನ್ನು ವೀಕ್ಷಿಸಲು ತೆರಳಿದರು. ಸಿಬ್ಬಂದಿಯಿಂದ ಐಟಿಐ ಸಾಧನ–ಸಲಕರಣೆಗಳ ಬಗ್ಗೆಯೂ ಮಾಹಿತಿ ಪಡೆದುಕೊಂಡರು. ಆ ಬಳಿಕಕ್ಯಾಂಪಸ್ಸಿನ ಮೆಟ್ಟಿಲುಗಳ ಬಳಿ ತೆರಳಿ ವಿದ್ಯಾರ್ಥಿಗಳ ಜತೆ ಫೋಟೊ ತೆಗೆಸಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಲಾದಜೋಶಿ, ಸಚಿವರಾದ ವಿ.ಸೋಮಣ್ಣ, ಶ್ರೀನಿವಾಸಪೂಜಾರಿ, ಸುನಿಲ್‌ಕುಮಾರ್‌, ಬಿ.ಶ್ರೀರಾಮುಲು, ಕುಲಪತಿ ಡಾ.ಭಾನುಮೂರ್ತಿ ಮತ್ತು ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.