ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಕಾಣಿಸಿಕೊಂಡಿರುವ ಕಪ್ಪುಶಿಲೀಂಧ್ರ ರೋಗಕ್ಕೆ ಸೂಕ್ತ ಚಿಕಿತ್ಸೆ ನೀಡಲು ಸರ್ಕಾರ ಈಗಾಗಲೇ ವಿವಿಧ ಕ್ರಮಗಳನ್ನು ಕೈಗೊಂಡಿದೆ.
ಈ ಮಧ್ಯೆ, ಹೆಚ್ಚುವರಿ ಚುಚ್ಚುಮದ್ದನ್ನು ವಿತರಿಸಲಾಗಿದೆ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಟ್ವೀಟ್ ಮಾಡಿದ್ದಾರೆ.
ಕಪ್ಪುಶಿಲೀಂಧ್ರ ರೋಗದ ಚಿಕಿತ್ಸೆಗಾಗಿ ರಾಜ್ಯಗಳಿಗೆ ಇಂದು ಮತ್ತೆ 19,420 ವಯಲ್ಸ್ ಲಿಪೋಸೊಮಾಲ್ ಎಂಫೋಟೆರಿಸೊನ್ ಬಿ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದೇವೆ.
ಕರ್ನಾಟಕಕ್ಕೆ 1030 ವಯಲ್ಸ್ ಒದಗಿಸಲಾಗಿದೆ. ಆಮದಿನ ಜೊತೆಗೇ ಸ್ವದೇಶಿ ಉತ್ಪಾದನೆಯೂ ಹೆಚ್ಚಾಗುತ್ತಿದ್ದು ಇದರ ಹಂಚಿಕೆ ನಿರಂತರವಾಗಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.