ಮಾಗಡಿ: ‘ಕೃಷಿ ಇಲಾಖೆಯಲ್ಲಿ ಹಲವು ವರ್ಷಗಳಿಂದ ಭರ್ತಿಯಾಗದೆ ಖಾಲಿ ಉಳಿದಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ 600ಕ್ಕೂ ಹೆಚ್ಚು ಹುದ್ದೆಗಳನ್ನು ಹಂತ ಹಂತವಾಗಿ ಶೀಘ್ರ ಭರ್ತಿ ಮಾಡಲಾಗುವುದು’ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
ಪಟ್ಟಣದ ಕೃಷಿ ಇಲಾಖೆ ಆವರಣದಲ್ಲಿ ಶುಕ್ರವಾರ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,‘ಸುಮಾರು ಹದಿನೈದು ವರ್ಷಗಳಿಂದ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಲ್ಲ. ನಮ್ಮ ಸರ್ಕಾರ ನೇಮಕಾತಿಗೆ ಅನುಮೋದನೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ’ ಎಂದರು.
‘ಹುದ್ದೆ ಭರ್ತಿ ಮಾಡಿ ಎಂದು ನಮ್ಮ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರೈತ ಸಂಘದ ಮುಖಂಡರು, ಹಿಂದಿನ ಸರ್ಕಾರವಿದ್ದಾಗ ಏನು ಮಾಡುತ್ತಿದ್ದರು. ಹಿಂದಿನವರು ಹಾಗೆಯೇ ಉಳಿಸಿಕೊಂಡಿದ್ದರ ಪರಿಣಾಮವಾಗಿ ಶೇ57ರಷ್ಟು ಹುದ್ದೆಗಳು ಭರ್ತಿಯಾಗಬೇಕಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.