ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಂಸದ ಬಿ.ಎನ್.ಬಚ್ಚೇಗೌಡ ಅವರು ಬಿಜೆಪಿಗೆ ಸೋಮವಾರ ರಾಜೀನಾಮೆ ನೀಡಲಿದ್ದಾರೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಅವರು, ‘ನನಗೆ ವಯಸ್ಸು 80 ವರ್ಷ ದಾಟಿದೆ. ಬೇರೆ ರಾಜಕೀಯ ಪಕ್ಷ ಸೇರುವುದಿಲ್ಲ. ಚುನಾವಣಾ ರಾಜಕೀಯದಿಂದ ದೂರ ಇರುವೆ. ಆದರೆ ಸಕ್ರಿಯ ರಾಜಕಾರಣದಲ್ಲಿಯೇ ಇರುವೆ. ಲೋಕಸಭಾ ಚುನಾವಣೆಯಲ್ಲಿ ಯಾರ ಪರವಾಗಿಯೂ ಕೆಲಸ ಮಾಡುವುದಿಲ್ಲ’ ಎಂದು ಹೇಳಿದರು.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಚ್ಚೇಗೌಡರ ಗೆಲುವಿನ ಮೂಲಕ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. 2023ರ ಆಗಸ್ಟ್‌ನಲ್ಲಿಯೇ ಅವರು ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.