ADVERTISEMENT

ಮುಡಾ ಪ್ರಕರಣ ಹರಿಯಾಣದಲ್ಲಿ ಪರಿಣಾಮ ಬೀರಿದೆ: ಕೋಳಿವಾಡ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 14:30 IST
Last Updated 8 ಅಕ್ಟೋಬರ್ 2024, 14:30 IST
ಕೆ.ಬಿ. ಕೋಳಿವಾಡ
ಕೆ.ಬಿ. ಕೋಳಿವಾಡ   

ಬೆಂಗಳೂರು: ‘ಹರಿಯಾಣ ವಿಧಾನಸಭೆ ಚುನಾವಣಾ ಪ್ರಚಾರದಲ್ಲಿ ಮುಡಾ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಮಾತನಾಡಿರುವುದು ಅಲ್ಲಿನ ಫಲಿತಾಂಶದ ಮೇಲೆ ಪರಿಣಾಮ ಬೀರಿದೆ’ ಎಂದು ಕಾಂಗ್ರೆಸ್‌ ಮುಖಂಡ ಕೆ.ಬಿ. ಕೋಳಿವಾಡ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮುಡಾ ಪ್ರಕರಣದ ತನಿಖೆ ಎದುರಿಸಬೇಕು. ಈ ಬಗ್ಗೆ ನಾನು ಈ ಹಿಂದೆ ನೀಡಿರುವ ಹೇಳಿಕೆಗೆ ಈಗಲೂ ಬದ್ಧ’ ಎಂದರು.

ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ನಮ್ಮ ಹೇಳಿಕೆಯಿಂದ ಪಕ್ಷಕ್ಕೆ ಧಕ್ಕೆಯಾದರೆ ನೋಟಿಸ್‌ ಕೊಡುತ್ತಾರೆ. ನಾನು ಪಕ್ಷದ ಹಿತದೃಷ್ಟಿಯಿಂದ ಹೇಳಿದ್ದೇನೆ. ಅಷ್ಟಕ್ಕೂ ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ, ಪಕ್ಷ ಉಳಿಸಲು ಕೆಲಸ ಮಾಡುತ್ತೇನೆ’ ಎಂದರು.

ADVERTISEMENT

‘ಮನೆಯಲ್ಲಿ ಕುಳಿತು ಜಾತಿಗಣತಿ ವರದಿ ಸಿದ್ಧಪಡಿಸಿದ್ದಾರೆ’ ಎಂಬ ಕಾಂಗ್ರೆಸ್‌ ಶಾಸಕ ಶಾಮನೂರು ಶಿವಶಂಕರಪ್ಪ ಆರೋಪಕ್ಕೆ ಪ್ರತಿಕ್ರಿಯಿಸಿದ ಕೋಳಿವಾಡ, ‘ಶಾಮನೂರು ಶಿವಶಂಕರಪ್ಪ ಓಡಾಡಿದ್ದಾರಾ? ನಮ್ಮ ತಾಲ್ಲೂಕಿನಲ್ಲಿ ಸಮೀಕ್ಷೆ ಮಾಡಿದವರ ಜೊತೆಗೆ ನಾನು ಮನೆ ಮನೆಗೆ ಹೋಗಿದ್ದೇನೆ. ಜಾತಿ ಉಪಜಾತಿಯನ್ನೂ ದಾಖಲಿಸಿಕೊಂಡಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.