ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ತಿರಸ್ಕರಿಸಿದ ‘ಹೈಕೋರ್ಟ್‌ನದು ರಾಜಕೀಯ ತೀರ್ಪು’ ಎಂದಿದ್ದ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ರಾಜ್ಯಪಾಲ ಥಾವರಚಂದ್ ಗೆಹಲೋತ್ ಸೂಚಿಸಿದ್ದಾರೆ.
ಅಡ್ವೊಕೇಟ್ ಜನರಲ್ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಇದೇ 6ರಂದು ಪತ್ರ ಬರೆದಿದ್ದಾರೆ. ‘ಹೈಕೋರ್ಟ್ ಆದೇಶದ ವಿರುದ್ಧ ಗಂಭೀರ ಆರೋಪ ಮಾಡಿದ ಮತ್ತು ನ್ಯಾಯಾಲಯದ ಸಮಗ್ರತೆಯನ್ನು ಪ್ರಶ್ನಿಸಿದ ಆಪಾದನೆ ಅವರ ಮೇಲಿದೆ. ಈ ಸಂಬಂಧ ಕಾನೂನಿನ ಅಡಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಿ’ ಎಂದು ಸೂಚಿಸಿದ್ದಾರೆ.
ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸಿದ್ದ ಹೈಕೋರ್ಟ್, ರಾಜ್ಯಪಾಲರ ಕ್ರಮವನ್ನು ಎತ್ತಿಹಿಡಿದಿತ್ತು.
ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಅವರು ಜಮೀರ್ ಅಹಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ನೀಡುವಂತೆ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.