ನವದೆಹಲಿ: ಮುಡಾ ಹಗರಣದ ಕುರಿತು ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ಹೊತ್ತಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರನ್ನು ನವದೆಹಲಿಯಲ್ಲಿ ಗುರುವಾರ ಭೇಟಿಯಾಗಿ ಸಮಾಲೋಚಿಸಿದರು.
ಇಲ್ಲಿ ಕೆಎಂಎಫ್ ಉತ್ಪನ್ನಗಳನ್ನು ಬಿಡುಗಡೆ ಮಾಡಿದ ಮುಖ್ಯಮಂತ್ರಿ, ಸಿಂಘ್ವಿ ಮತ್ತು ಸಿಬಲ್ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸುಮಾರು ಒಂದು ತಾಸು ಚರ್ಚಿಸಿದರು. ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.