ADVERTISEMENT

MUDA Scam | ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಅನಿವಾರ್ಯ: ಸಂಸದ ಶೆಟ್ಟರ್

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2024, 7:16 IST
Last Updated 17 ಆಗಸ್ಟ್ 2024, 7:16 IST
<div class="paragraphs"><p>ಜಗದೀಶ‌ ಶೆಟ್ಟರ್</p></div>

ಜಗದೀಶ‌ ಶೆಟ್ಟರ್

   

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿ.ಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ‌ ನೀಡಿದ್ದಾರೆ‌. ಸಿದ್ದರಾಮಯ್ಯ ಅವರು‌ ಕೂಡಲೇ ರಾಜೀನಾಮೆ‌ ನೀಡಬೇಕು. ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಸಂಸದ ಜಗದೀಶ‌ ಶೆಟ್ಟರ್ ಆಗ್ರಹಿಸಿದರು.

ಶನಿವಾರ ಸುದ್ದಿಗಾರರೊ‌ಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪತ್ನಿ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿದ್ದು ಕಾನೂನು ಬಾಹಿರ. ಅವರು ತನಿಖೆ‌ ಆರಂಭವಾದ ನಂತರ ರಾಜೀನಾಮೆ‌ ಕೊಡುತ್ತಾರೊ, ಈಗಲೇ ರಾಜೀನಾಮೆ ನೀಡುತ್ತಾರೊ ಎಂಬುದನ್ನು ನೋಡಬೇಕು. ರಾಜೀನಾಮೆ ನೀಡುವುದು ಅನಿವಾರ್ಯ ಎಂದರು.

ADVERTISEMENT

ಪ್ರಾಸಿಕ್ಯೂಷನ್‌ಗೆ ಅನುಮತಿ‌ ನೀಡಿದ್ದರಿಂದ ಬಹಳಷ್ಟು ಜನ ಕಾಂಗ್ರೆಸ್ ನಾಯಕರು ಒಳಗೊಳಗೆ  ಖುಷಿ ಪಡುತ್ತಿದ್ದಾರೆ. ಅರ್ಕಾವತಿ‌ ಪ್ರಕರಣದಲ್ಲಿ ಅವರು ಪಾರಾಗಿದ್ದರು.

ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ. ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಗೆ ಹೋಗಬಹುದು. ಅಲ್ಲಿನ‌ ತೀರ್ಪು ಆಧರಿಸಿ ಮುಂದಿನ‌ ಹೋರಾಡ ಮಾಡುತ್ತೇವೆ ಎಂದು ಹೇಳಿದರು.

ರಾಜ್ಯಪಾಲರು ಸಂವಿಧಾನಬದ್ಧವಾಗಿ ಕ್ರಮ‌ ಕೈಗೊಂಡೊದ್ದಾರೆ. ಶಶಿಕಲಾ‌ ಜೊಲ್ಲೆ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ಕೊಡಲಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಕಾನೂನು ತಿಳಿದುಕೊ‌ಂಡಿದ್ದೇನೆ ಎಂದು ಹೇಳುವ ಅವರು ಈ ರೀತಿ ಮಾತನಾಡುವುದು ಸರಿಯಲ್ಲ. ಆಗ ವಿರೋಧ ಪಕ್ಷದ ನಾಯಕರಾಗಿದ್ದ ಅವರು ಏಕೆ ಧ್ವನಿ ಎತ್ತಲಿಲ್ಲ ಎಂದು ಪ್ರಶ್ನಿಸಿದರು.

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಕ್ಕೆ ಜಾತಿ‌ ಬಣ್ಣ ಬಳಿಯಬಾರದು. ಅಹಿಂದ ನಾಯಕರಾದರೆ ಈ ರೀತಿ ಮಾಡಬಹುದಾ? ಅವರು ತಪ್ಪು ಮಾಡಿಲ್ಲ ಎಂದಾದರೆ ಏಕೆ ಹೆದರಬೇಕು?. ಪ್ರಧಾನಿ ನರೇಂದ್ರ ಮೋದಿ ಸಹ‌ ಹಿಂದುಳಿದ ವರ್ಗಗಳ ನಾಯಕ. ಪ್ರಧಾ‌ನಿಯಾಗಿ ಹತ್ತು ವರ್ಷ ಆಡಳಿತ ನಡೆಸಿದ್ದಾರೆ‌. ಅವರ ಮೇಲೆ ಹಗರಣಗಳ ಅರೋಪವಿದೆಯೇ?. ನೀವು ಅವರ ರೀತಿ ಪ್ರಾಮಾಣಿಕ ಆಡಳಿತ ನಡೆಸಬಹುದಿತ್ತು ಎಂದರು.

ಶಾಸಕ‌ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಅತೃಪ್ತರು ಪಾದಯಾತ್ರೆಗೆ ಮುಂದಾಗಿರುವುದಕ್ಕೆ ಪ್ರತಿಕ್ರಿಯಿಸಿ, ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.