ADVERTISEMENT

MUDA Scam | ಪಾರದರ್ಶಕ ತನಿಖೆಯಾಗಲಿ, ಸಿಎಂ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 17 ಆಗಸ್ಟ್ 2024, 6:01 IST
Last Updated 17 ಆಗಸ್ಟ್ 2024, 6:01 IST
<div class="paragraphs"><p>ಬಿ.ವೈ ವಿಜಯೇಂದ್ರ</p></div>

ಬಿ.ವೈ ವಿಜಯೇಂದ್ರ

   

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಲು (ಪ್ರಾಸಿಕ್ಯೂಷನ್‌) ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದ್ದಾರೆ.

ಈ ಪ್ರಕರಣದ ತನಿಖೆ ಪಾದರ್ಶಕವಾಗಿ ನಡೆಯಲು ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, 'ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ' ಎಂದು ಹೇಳಿದ್ದಾರೆ.

'ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಮುಖ್ಯಮಂತ್ರಿಯವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.