ADVERTISEMENT

MUDA Scam: CM ವಿರುದ್ಧದ ಕ್ರಿಮಿನಲ್ ಪ್ರಕರಣದ ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2024, 14:42 IST
Last Updated 12 ಸೆಪ್ಟೆಂಬರ್ 2024, 14:42 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಹೈಕೋರ್ಟ್</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಹೈಕೋರ್ಟ್

   

– ಪ್ರಜಾವಾಣಿ ಚಿತ್ರಗಳು

ADVERTISEMENT

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಕ್ರಿಮಿನಲ್‌ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಗುರುವಾರ ಮುಕ್ತಾಯಗೊಳಿಸಿದ್ದು, ತೀರ್ಪು ಕಾಯ್ದಿರಿಸಿದೆ.

ಅಂತೆಯೇ, ‘ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿರುವ ಈ ಸಂಬಂಧದ ಖಾಸಗಿ ದೂರಿಗೆ ಸಂಬಂಧಿಸಿದ ವಿಚಾರಣೆ ಮುಂದೂಡಬೇಕು ಹಾಗೂ ಯಾವುದೇ ಕ್ರಮ ಕೈಗೊಳ್ಳಬಾರದು ಎಂಬ ಈ ಹಿಂದಿನ ಆದೇಶವು ಸದರಿ ಪ್ರಕರಣದ ತೀರ್ಪು ಪ್ರಕಟವಾಗುವತನಕ  ಜಾರಿಯಲ್ಲಿರುತ್ತದೆ’ ಎಂದು ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರಕಟಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.