ADVERTISEMENT

ಪ್ರಾಸಿಕ್ಯುಷನ್‌ಗೆ ಅನುಮತಿ; ಸರ್ಕಾರಕ್ಕೆ ತೊಂದರೆಯಾಗದು: ಚಲುವರಾಯಸ್ವಾಮಿ

ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 0:30 IST
Last Updated 3 ಆಗಸ್ಟ್ 2024, 0:30 IST
ಎನ್‌. ಚಲುವರಾಯಸ್ವಾಮಿ
ಎನ್‌. ಚಲುವರಾಯಸ್ವಾಮಿ   

ನಾಗಮಂಗಲ (ಮಂಡ್ಯ): ‘ಮೈಸೂರಿನ ಮುಡಾ ನಿವೇಶನ ಹಂಚಿಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯುಷನ್‌ಗೆ ಅನುಮತಿ ನೀಡಿದರೂ ಸರ್ಕಾರಕ್ಕೆ ತೊಂದರೆಯಾಗದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿ, ‘ಮುಖ್ಯಮಂತ್ರಿ ಕಾನೂನುಬದ್ಧವಾಗಿಯೇ ನಿವೇಶನ ಪಡೆದುಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡೆದಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಡಾ ಅಧ್ಯಕ್ಷರಾಗಿದ್ದ ಪಿ.ರಾಜೀವ್ ವಿರುದ್ಧ ಕಾನೂನು ಕ್ರಮ‌ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬದಲಾವಣೆ ಇಲ್ಲ. ಅವರ ಸ್ಥಾನಕ್ಕೆ‌ ಕುತ್ತೂ ಇಲ್ಲ’ ಎಂದು ಸಮರ್ಥಿಸಿಕೊಂಡರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.