ADVERTISEMENT

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಸಿಎಂ ವಿರುದ್ಧ ಖಾಸಗಿ ದೂರು ದಾಖಲು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2024, 8:55 IST
Last Updated 8 ಆಗಸ್ಟ್ 2024, 8:55 IST
<div class="paragraphs"><p>ಮುಖ್ಯಮಂತ್ರಿ ಸಿದ್ದರಾಮಯ್ಯ</p></div>

ಮುಖ್ಯಮಂತ್ರಿ ಸಿದ್ದರಾಮಯ್ಯ

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) 14 ನಿವೇಶನಗಳನ್ನು ಅಕ್ರಮವಾಗಿ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ ಐವರು ಆರೋಪಿಗಳ ವಿರುದ್ಧ ಸಿಬಿಐ ಅಥವಾ ಬೇರಾವುದೇ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಸಲು ಆದೇಶಿಸಬೇಕು’ ಎಂದು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಲಾಗಿದೆ.

ADVERTISEMENT

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಈ ಖಾಸಗಿ ದೂರಿನಲ್ಲಿ ಮುಖ್ಯಮಂತ್ರಿ ಸಿದ್ದಾರಾಮಯ್ಯ, ಅವರ ಪತ್ನಿ ಪಾರ್ವತಿ, ತೊಣಚಿಕೊಪ್ಪಲಿನ ಮಲ್ಲಿಕಾರ್ಜುನ ಸ್ವಾಮಿ (ಭಾವಮೈದುನ), ಬೆಂಗಳೂರಿನ ಜೆ.ದೇವರಾಜು ಹಾಗೂ ಇತರರ ಹೆಸರಿನಡಿ ಒಟ್ಟು ಐವರನ್ನು ಆರೋಪಿಗಳನ್ನಾಗಿ ಕಾಣಿಸಲಾಗಿದೆ.

ದೂರನ್ನು ಸ್ವೀಕರಿಸಿರುವ ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು; ದಾಖಲೆಗಳನ್ನು ಪರಿಶೀಲಿಸಿ ಶುಕ್ರವಾರದ (ಆ.9) ಕಲಾಪದಲ್ಲಿ ಪ್ರಸ್ತುತಪಡಿಸಲು ಕೋರ್ಟ್‌ ಕಚೇರಿಗೆ ಸೂಚಿಸಿದ್ದಾರೆ.

‘ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ–1863ರ ಕಲಂ 120ಬಿ, 166, 403, 406, 420, 426, 465, 468, 340, 351 ಮತ್ತು ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 61, 188, 314, 316, 318, 324, 336, 340, ಮತ್ತು 351 ಹಾಗೂ ಭ್ರಷ್ಟಾಚಾರ ನಿಗ್ರಹ ಕಾಯ್ದೆ– 1988ರ ಕಲಂ 9 ಮತ್ತು 13ರ ಅಡಿಯಲ್ಲಿ ಕ್ರಮ ಕೈಗೊಳ್ಳಲು ಆದೇಶಿಸಬೇಕು’ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.