ADVERTISEMENT

ಮುರುಘಾ ಮಠ: ವಿಚಾರಣೆ ಮುಂದಕ್ಕೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2023, 0:30 IST
Last Updated 18 ಆಗಸ್ಟ್ 2023, 0:30 IST
ಚಿತ್ರದುರ್ಗ ಮುರುಘಾ ಮಠ
ಚಿತ್ರದುರ್ಗ ಮುರುಘಾ ಮಠ   

ಚಿತ್ರದುರ್ಗ: ‘ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ’ಕ್ಕೆ (ಎಸ್‌ಜೆಎಂ) ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕ ಮಾಡಿದ ಆದೇಶವನ್ನು ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಲಾದ ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್‌ ಇದೇ 21ಕ್ಕೆ ಮುಂದೂಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಲಾದ ಒಟ್ಟು ಏಳು ಮೇಲ್ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರವೂ ಮುಂದುವರಿಸಿತು. ಶಿವಮೂರ್ತಿ ಶರಣರ ಪರ ಹಿರಿಯ ವಕೀಲರಾದ ಜಯಕುಮಾರ್ ಎಸ್.ಪಾಟೀಲ ಮತ್ತು ಮಠದ ಪರ ಉದಯ ಹೊಳ್ಳ ವಾದ ಮಂಡಿಸಿದರು. ಅಡ್ವೊಕೇಟ್‌ ಜನರಲ್‌ ಅವರ ವಾದ ಮಂಡನೆಗಾಗಿ ವಿಚಾರಣೆಯನ್ನು ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT