ADVERTISEMENT

ಪೋಕ್ಸೊ ಪ್ರಕರಣ: ಮಹಿಳಾ ವಾರ್ಡನ್‌ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2023, 15:34 IST
Last Updated 27 ಡಿಸೆಂಬರ್ 2023, 15:34 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಚಿತ್ರದುರ್ಗ: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಎಸ್‌.ರಶ್ಮಿ ಒಂದೂವರೆ ವರ್ಷದ ಬಳಿಕ ಕಾರಾಗೃಹದಿಂದ ಬುಧವಾರ ಬಿಡುಗಡೆಯಾದರು.

ಹೈಕೋರ್ಟ್‌ನ ನ್ಯಾಯಮೂರ್ತಿ ಮೊಹಮ್ಮದ್‌ ನವಾಜ್‌ ಏಕ ಸದಸ್ಯ ಪೀಠ ಡಿ.21ರಂದು ರಶ್ಮಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನಿನಲ್ಲಿ ವಿಧಿಸಿದ ಷರತ್ತುಗಳನ್ನು ಪೂರೈಸಿದ ದಾಖಲೆಗಳನ್ನು ಪರಿಶೀಲಿಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಬಿಡುಗಡೆಗೆ ಆದೇಶಿಸಿತು. ರಶ್ಮಿ ಅವರು ಬುಧವಾರ ಸಂಜೆ 7ಕ್ಕೆ ಕಾರಾಗೃಹದಿಂದ ಹೊರಬಂದರು.

ADVERTISEMENT

ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೊ ಪ್ರಕರಣದಲ್ಲಿ ಹಾಸ್ಟೆಲ್‌ ಮಹಿಳಾ ವಾರ್ಡನ್‌ ರಶ್ಮಿಯನ್ನು 2022ರ ಸೆ.1ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಹಕಾರ ನೀಡುತ್ತಿದ್ದ ಆರೋಪದ ಮೇರೆಗೆ ಇವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.