ಬೆಂಗಳೂರು: ‘ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂಪ್ಪ ಸ್ಪಷ್ಟನೆ ನೀಡಿದ್ದಾರೆ.ಪಾಕ್ ಪ್ರಧಾನಿ ಇಮ್ರಾನ್ ನೇತೃತ್ವದತೆಹ್ರೀಕ್–ಎ–ಇನ್ಸಾಫ್ (ಪಿಟಿಐ) ತನ್ನ ಟ್ವಿಟರ್ ಖಾತೆಯಲ್ಲಿ@PTIofficialಯಡಿಯೂರಪ್ಪ ಅವರು ಚಿತ್ರದುರ್ಗದಲ್ಲಿ ನೀಡಿದ್ದ ಹೇಳಿಕೆಯ ವಿಡಿಯೊ ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದ ಹಿನ್ನೆಲೆಯಲ್ಲಿ ಯಡಿಯೂರಪ್ಪ ಈ ಸ್ಪಷ್ಟನೆ ನೀಡಿದ್ದಾರೆ.
‘ದೇಶದ ರಾಜಕೀಯ ಪರಿಸ್ಥಿತಿ ಬಿಜೆಪಿಯ ಪರವಾಗಿದೆ ಎಂದು ಹಲವು ತಿಂಗಳುಗಳಿಂದ ನಾನು ಹೇಳುತ್ತಿದ್ದೆ. ಮೋದಿ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಬಿಜೆಪಿಯು ಕನಿಷ್ಠ 22 ಲೋಕಸಭಾ ಸ್ಥಾನಗಳನ್ನು ಗೆಲ್ಲಲಿದೆ ಎಂದು ನಾನು ಹೇಳಿದ್ದು ಇದೇ ಮೊದಲೇನಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.
‘ನಾನು ನಿನ್ನೆ ನೀಡಿದ್ದ ಹೇಳಿಕೆಯನ್ನು ಸಂಪೂರ್ಣ ತಪ್ಪಾಗಿ ಅರ್ಥೈಸಲಾಗಿದೆ. ದೇಶದ ಸಶಸ್ತ್ರಪಡೆಗಳ ಬಗ್ಗೆ ನನಗೆ ಅಪಾರ ಗೌರವವಿದೆ. ದೇಶದ ಭದ್ರತೆಗಾಗಿ ಗಡಿಯಲ್ಲಿ ಹೋರಾಡುವ ಯೋಧರ ಧೈರ್ಯ–ಸಾಹಸಗಳನ್ನು ನಾನು ಗೌರವಿಸುತ್ತೇನೆ. ದೇಶದ ಜನರ ಜೊತೆಗೆ ನಿಂತು ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಅವರು ಕ್ಷೇಮವಾಗಿ ಹಿಂದಿರುಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನನಗೆ ಯಾವಾದಲೂ ದೇಶವೇ ಮೊದಲು, ನಂತರ ಪಕ್ಷ’ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಚಿತ್ರದುರ್ಗದಲ್ಲಿಯಡಿಯೂರಪ್ಪ ಹೇಳಿದ್ದೇನು: ವಿಡಿಯೊ ನೋಡಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.