ಮಂಡ್ಯ: ಮಂಡ್ಯದ ಮೈಷುಗರ್ ಕಾರ್ಖಾನೆಯನ್ನು ಖಾಸಗೀಕರಣಗೊಳಿಸಲು ನಿರ್ಧರಿಸಲಾಗಿದ್ದು, ಶೀರ್ಘವೇ ಈ ಬಗ್ಗೆ ನಿರ್ಧಾರ ಪ್ರಕಟಿಸಲಾಗುವುದು ಎಂದು ಸಕ್ಕರೆ ಸಚಿವ ಆರ್.ಬಿ. ತಿಮ್ಮಾಪೂರ ಶುಕ್ರವಾರ ಇಲ್ಲಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ 67 ಕಾರ್ಖಾನೆಗಳು ಕಳೆದ ವರ್ಷ 410.10 ಲಕ್ಷ ಟನ್ ಕಬ್ಬು ಅರೆದು ₹ 44.71 ಲಕ್ಷ ಟನ್ ಸಕ್ಕರೆ ಉತ್ಪಾದಿಸಿವೆ. ಕಬ್ಬು ಸರಬರಾಜು ಮಾಡಿದ ರೈತರಿಗೆ ₹ 1,810 ಕೋಟಿ ಬಾಕಿ ಹಣ ಪಾವತಿಸಬೇಕಿದೆ’ ಎಂದರು.
‘ಇದುವರೆಗೆ ಕಾರ್ಖಾನೆಗಳಿಗೆ ಕಬ್ಬು ಪೂರೈಸಿದ ರೈತರಿಗೆ ₹ 10,126 ಕೋಟಿ ಪಾವತಿಸಲಾಗಿದೆ. 12 ಕಾರ್ಖಾನೆಗಳು ಪೂರ್ಣ ಬಾಕಿ ಪಾವತಿಸಿವೆ. ಉಳಿದ ಕಾರ್ಖಾನೆಗಳು ಬ್ಯಾಂಕ್‌ಗಳಿಂದ ಸಾಲ ಪಡೆದು ರೈತರ ಬಾಕಿ ಹಣ ತೀರಿಸಲು ಸಾಧ್ಯವಾಗುವಂತೆ ರಾಜ್ಯ ಸರ್ಕಾರ ಸಾಲ ಮಂಜೂರು ಮಾಡಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.