ಬೆಂಗಳೂರು: ‘ನಬಾರ್ಡ್‌ನಿಂದ ರಾಜ್ಯಕ್ಕೆ ನೀಡಲಾಗುವ ಸಾಲದ ಮೊತ್ತವನ್ನು ಪ್ರಸಕ್ತ ಸಾಲಿನಲ್ಲಿ ಕಡಿತ ಮಾಡಿದ ಕುರಿತು ಚರ್ಚಿಸಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸಿದ್ದರಾಮಯ್ಯ ಅವರು ಬುಧವಾರ ರಾತ್ರಿ ದೆಹಲಿಗೆ ಪ್ರಯಾಣ ಬೆಳೆಸಿದರು. ದೆಹಲಿಯಲ್ಲಿ ನಂದಿನಿ ಉತ್ಪನ್ನಗಳನ್ನು ಗುರುವಾರ ಅವರು ಬಿಡುಗಡೆ ಮಾಡಲಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಬಾರ್ಡ್ ಕಳೆದ ವರ್ಷ ರಾಜ್ಯಕ್ಕೆ ₹5,600 ಕೋಟಿ ಸಾಲ ನೀಡಿತ್ತು. ಈ ವರ್ಷ ₹2,340 ಕೋಟಿಗೆ ಕಡಿತ ಮಾಡಿದೆ. ಈ ಬಗ್ಗೆ ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಲಾಗುವುದು’ ಎಂದರು.
‘ದೆಹಲಿ ಭೇಟಿ ವೇಳೆ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುತ್ತೀರಾ’ ಎಂಬ ಪ್ರಶ್ನೆಗೆ, ‘ಗುರುವಾರ ಸಂಜೆಯ ಒಳಗೆ ರಾಜ್ಯಕ್ಕೆ ಮರಳಬೇಕು. ಸಮಯ ಸಿಕ್ಕರೆ ಭೇಟಿ ಮಾಡುತ್ತೇನೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.