ADVERTISEMENT

ನಾಡೋಜ ಗೌರವ ಸಾಧಕರ ಸಾಧನೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 5:21 IST
Last Updated 8 ಏಪ್ರಿಲ್ 2022, 5:21 IST
ಗೊರುಚ
ಗೊರುಚ   

ಗೊ.ರು.ಚನ್ನಬಸಪ್ಪ

* ಚಿಕ್ಕಮಗಳೂರಿನ ಗೊಂಡೇದಹಳ್ಳಿಯಲ್ಲಿ 1930ರ ಮೇ 18ರಂದು ಜನಿಸಿರುವ ಗೊ.ರು.ಚನ್ನಬಸಪ್ಪ ಅವರು ಶಾಲಾ ಶಿಕ್ಷಕರಾಗಿ ವೃತ್ತಿಜೀವನ ಆರಂಭಿಸಿದವರು. ಬಳಿಕ ಕನ್ನಡ ಸಾಹಿತ್ಯ ಪರಿಷತ್ತು, ಜಾನಪದ ಅಕಾಡೆಮಿ, ಪುಸ್ತಕ ಪ್ರಾಧಿಕಾರ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. ಅನೇಕ ಕೃತಿಗಳನ್ನು ರಚಿಸಿದ್ದಾರೆ. ಜಾನಪದ ಸಾಹಿತ್ಯ ಇವರ ನೆಚ್ಚಿನ ಕ್ಷೇತ್ರ. ಪಂಪ, ಬಸವ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

ಪ್ರೊ.ಟಿ.ವಿ. ವೆಂಕಟಾಚಲಶಾಸ್ತ್ರೀ

ADVERTISEMENT

* 1933ರ ಆಗಸ್ಟ್‌ 26ರಂದು ಮೈಸೂರಿನಲ್ಲಿ ಜನಿಸಿರುವ ವೆಂಕಟಾಚಲಶಾಸ್ತ್ರೀ ಅವರು ಮೈಸೂರಿನಲ್ಲಿ ಓದು ಮುಗಿಸಿದರು. ನಂತರ 1968ರಿಂದ 1994ರ ವರೆಗೆ ಮೈಸೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ನಿರ್ವಹಿಸಿ ನಿವೃತ್ತರಾದರು. ಹಳಗನ್ನಡ, ಶಾಸ್ತ್ರಸಾಹಿತ್ಯ ಇವರ ಪ್ರಿಯವಾದ ಕ್ಷೇತ್ರ. 130ಕ್ಕೂ ಅಧಿಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ಭಾಷಾ ಸಮ್ಮಾನ್‌, ಕರ್ನಾಟಕ ಸಾಹಿತ್ಯ ಅಕಾಡೆಮಿ, ಪಂಪ, ನೃಪತುಂಗ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಪಾತ್ರರಾಗಿದ್ದಾರೆ.

ಭಾಷ್ಯಂ ಸ್ವಾಮಿ

* ಭಾಷ್ಯಂ ಸ್ವಾಮಿಯವರು ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ 1955ರ ಜನವರಿ 8ರಂದು ಜನಿಸಿದರು. ಸಂಸ್ಕೃತದಿಂದ ಕನ್ನಡಕ್ಕೆ ಹಲವು ಕೃತಿಗಳನ್ನು ಅನುವಾದಗೊಳಿಸಿ ಕನ್ನಡ ಸಾಹಿತ್ಯ ಶ್ರೀಮಂತಗೊಳಿಸಿದ್ದಾರೆ. ವಿಶಿಷ್ಟಾದ್ವೈತ ವೇದಾಂತ ಸ್ನಾತಕೋತ್ತರದಲ್ಲಿ ಉತ್ತಮ ಸಾಧನೆ ತೋರಿದ್ದಕ್ಕೆ ಅಂದಿನ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್‌ ಅವರಿಂದ ಚಿನ್ನದ ಪದಕ ಪಡೆದಿದ್ದಾರೆ. ಮೈಸೂರು ಸರ್ಕಾರಿ ಮಹಾರಾಜ ಕಾಲೇಜಿನಲ್ಲಿ ಸಂಸ್ಕೃತ ಪ್ರಾಧ್ಯಾಪಕರಾಗಿ 33 ವರ್ಷ ಕೆಲಸ ನಿರ್ವಹಿಸಿದ್ದಾರೆ. 60ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.