ADVERTISEMENT

ಮನೆಗೆ ಮದ್ಯ ಇಲ್ಲ: ಕ್ಷಮೆ ಕೋರಿದ ಸಚಿವ ಎಚ್.ನಾಗೇಶ್

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2019, 1:15 IST
Last Updated 6 ಸೆಪ್ಟೆಂಬರ್ 2019, 1:15 IST
   

ಬೆಂಗಳೂರು: ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡುವುದಾಗಿ ಅಬಕಾರಿ ಸಚಿವ ಎಚ್.ನಾಗೇಶ್ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡ ಕಾರಣದಿಂದ, ಈ ನಿರ್ಧಾರದಿಂದ ಅವರು ಹಿಂದೆ ಸರಿದಿದ್ದಾರೆ.

‘ಹೆಣ್ಣು ಮಕ್ಕಳಿಗೆ ನೋವಾಗಬಾರದು ಎಂಬ ಕಾರಣಕ್ಕೆ ಮನೆ ಬಾಗಿಲಿಗೆ ಮದ್ಯ ಮಾರಾಟ ಮಾಡುವುದಿಲ್ಲ. ಮಹಿಳೆ
ಯರಿಗೆ ಗೌರವ ಕೊಡಬೇಕು ಎಂಬ ಕಾರಣಕ್ಕೆ ಕ್ಷಮೆ ಕೋರುವುದಾಗಿ’ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ...ಮನೆ ಬಾಗಿಲಿಗೆ ಬರಲಿದೆ ಮದ್ಯ!

ADVERTISEMENT

‘ತಾಂಡಾಗಳಲ್ಲಿ ಸಂಚಾರಿ ಮದ್ಯ ಮಾರಾಟ ಮಳಿಗೆ ಆರಂಭಿಸಲ್ಲ’ ಎಂದರು. ರಾಜ್ಯದಲ್ಲಿ ಪಾನ ನಿಷೇಧಕ್ಕೆ ಆಗ್ರಹಿಸಿ ಜಾಥಾ ನಡೆಸಿದ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಕ್ಕೂ ಕ್ಷಮೆ ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.