ADVERTISEMENT

ನಂದಿನಿ ಹಾಲಿನ ದರ ಏರಿಕೆ: ಯಾವುದೇ ತೀರ್ಮಾನವಿಲ್ಲ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2022, 14:04 IST
Last Updated 21 ನವೆಂಬರ್ 2022, 14:04 IST
   

ಬೆಂಗಳೂರು:ನಂದಿನಿ ಹಾಲಿನ ದರ ಏರಿಕೆ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕರೆದಿದ್ದ ಕೆಎಂಎಫ್‌ ಮತ್ತು ಅಧಿಕಾರಿಗಳ ಸಭೆಯಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಿಲ್ಲ.

‘ಕರ್ನಾಟಕ ಹಾಲು ಮಹಾಮಂಡಳದ ಆಡಳಿತ ಮಂಡಳಿಯೇ ಈ ಸಂಬಂಧ ತೀರ್ಮಾನ ತೆಗೆದುಕೊಳ್ಳಬಹುದು. ಆದರೆ, ರೈತರು ಮತ್ತು ಗ್ರಾಹಕರವನ್ನು ಹಿತವನ್ನು ಕಾಪಾಡಬೇಕು. ಯಾರಿಗೂ ಅನ್ಯಾಯ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬಹುದು’ ಎಂದು ಬೊಮ್ಮಾಯಿ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

‘ರಾಜ್ಯದ ಮತ್ತು ನೆರೆಯ ರಾಜ್ಯಗಳ ಹಾಲಿನ ದರಗಳ ಮಾಹಿತಿ ಪಡೆದಿದ್ದೇನೆ. ರೈತರಿಗೆ ಯಾವುದೇ ಸಮಸ್ಯೆ ಆಗಬಾರದು ಎಂದೂ ಹೇಳಿದ್ದೇನೆ’ ಎಂದರು. ಹಾಲು ಮಹಾಮಂಡಳದ ಆಡಳಿತ ಮಂಡಳಿ ಇನ್ನು ಎರಡು ದಿನಗಳಲ್ಲಿ ಸಭೆ ನಡೆಸಲಿದೆ ಎಂದು ಕೆಎಂಎಫ್‌ ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.