ADVERTISEMENT

ತಿರುಪತಿಗೆ ತುಪ್ಪ: ಬಿಜೆಪಿ‌ ಅವಧಿಯಲ್ಲಿ ಸ್ಥಗಿತ– ಸಿಎಂ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2023, 15:57 IST
Last Updated 1 ಆಗಸ್ಟ್ 2023, 15:57 IST
ತುಪ್ಪ/ಸಾಂದರ್ಭಿಕ ಚಿತ್ರ
ತುಪ್ಪ/ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಆಂಧ್ರಪ್ರದೇಶದ ತಿರುಪತಿಗೆ ನಂದಿನಿ ತುಪ್ಪ ಪೂರೈಕೆ ಸ್ಥಗಿತಗೊಂಡಿರುವುದು ಇಂದು, ನಿನ್ನೆಯ ವಿಚಾರವಲ್ಲ. ಕಳೆದ ಒಂದೂವರೆ ವರ್ಷದ ಹಿಂದೆಯೇ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಳಿಸಲಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೂ ಆಗಿರುವ ಸಂಸದ ನಳಿನ್‌ಕುಮಾರ್‌ ಕಟೀಲ್‌ ಅವರನ್ನು ಉದ್ದೇಶಿಸಿ ಟ್ವೀಟ್‌ ಮಾಡಿರುವ ಮುಖ್ಯಮಂತ್ರಿ, ‘ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಹಿಂದೂ ಧಾರ್ಮಿಕ ಶ್ರದ್ಧಾ ಭಕ್ತಿಯ ವಿರೋಧಿಯೋ ಅಥವಾ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರು ಮಾತ್ರ ಹಿಂದೂ ವಿರೋಧಿಯೋ?’ ಎಂದು ಕೆಣಕಿದ್ದಾರೆ.

‘ನಮಗೆ ಜನರ ಧಾರ್ಮಿಕ ನಂಬಿಕೆಯ ಜೊತೆಗೆ ಹೈನುಗಾರರ ಬದುಕು ಮುಖ್ಯ. ಹೀಗಾಗಿ ನಾಡಿನ ರೈತರ ಹಿತದೃಷ್ಟಿಯಿಂದ ನಾವು ಕೇಳುವ ದರ ನೀಡಲು ತಿರುಪತಿ ದೇವಾಲಯದವರು ಒಪ್ಪುವುದಾದರೆ ನಂದಿನಿ ತುಪ್ಪ ಪೂರೈಸಲು ನಮಗೆ ಯಾವ ಸಮಸ್ಯೆಯೂ ಇಲ್ಲ’ ಎಂದಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.