ಬೆಂಗಳೂರು: ಕನ್ನಡದ ‘ನಾತಿಚರಾಮಿ’ ಸಿನಿಮಾಕ್ಕೆ ಪ್ರಸಕ್ತ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಐದನ್ನು ನೀಡಿ
ರುವುದನ್ನು ತಡೆ ಹಿಡಿಯಬೇಕು ಎಂದು ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.
ಸಿನಿಮಾ ನಿರ್ದೇಶಕ ದಯಾಳ್ ಪದ್ಮನಾಭನ್ ಅರ್ಜಿ ದಾಖಲಿಸಿದ್ದು, ವಕೀಲ ಜಿ.ಆರ್.ಮೋಹನ್ ವಕಾಲತ್ತು ವಹಿಸಿದ್ದಾರೆ. ಈ ಅರ್ಜಿ ವಿಚಾರಣೆಗೆ ಬರಬೇಕಿದೆ.ನವದೆಹಲಿಯಲ್ಲಿರುವ ಚಲನಚಿತ್ರೋತ್ಸವ ನಿರ್ದೇಶನಾಲಯದ ಕಾರ್ಯದರ್ಶಿ, 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ–2018ರ ಆಯ್ಕೆ ಸಮಿತಿ ಸದಸ್ಯರಾಗಿದ್ದ ಬಿ.ಎಸ್.ಲಿಂಗದೇವರು ಮತ್ತು ’ನಾತಿಚರಾಮಿ' ಚಿತ್ರದ ನಿರ್ಮಾಪಕ ಎಂ.ರಮೇಶ್ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಆರೋಪ: ಬಿ.ಎಸ್.ಲಿಂಗದೇವರು ‘ಅಕ್ಕ ಕಮ್ಯುನಿಕೇಷನ್ ಪ್ರೈವೇಟ್ ಲಿಮಿಟೆಡ್ ಕಂಪನಿ’ಯ ನಿರ್ದೇಶಕರಾಗಿದ್ದಾರೆ.
‘ನಾತಿಚರಾಮಿ’ ಚಿತ್ರದ ಸಂಕಲನಕ್ಕೆ ‘ಅಕ್ಕ’ ಕಂಪನಿ ಸಹಾಯ ಮಾಡಿದೆ. ಇದರಿಂದಾಗಿ ಲಿಂಗದೇವರು ‘ನಾತಿಚರಾಮಿ’ ಚಿತ್ರದ ನಿರ್ಮಾ
ಣದಲ್ಲಿ ನೇರ ಪಾತ್ರ ವಹಿಸಿರುವುದು ಸ್ಪಷ್ಟವಾಗಿದೆ. ಆದರೆ, ಆಯ್ಕೆ ಸಮಿತಿ ಮುಂದೆ ನೀಡಲಾಗಿದ್ದ ಘೋಷಣಾ ಪ್ರಮಾಣ ಪತ್ರದಲ್ಲಿ ಈ ಅಂಶವನ್ನು ಮುಚ್ಚಿಡಲಾಗಿದೆ’ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.