ಬೆಂಗಳೂರು:ಕೇಂದ್ರ ಸಚಿವ ಅನಂತ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಮಂಗಳವಾರ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರ ಪೂರ್ವ ಸಿದ್ಧತೆಯನ್ನು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರಪರಿಶೀಲನೆ ನಡೆಸಿದರು.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಅನಂತ ಕುಮಾರ್ ಅವರ ದರ್ಶನಕ್ಕೆ ಸಾರ್ವಜನಿಕರು ಹಾಗೂ ಗಣ್ಯರಿಗೆ ಅವಕಾಶ ಮಾಡಿಕೊಡಲು ಬಿಬಿಎಂಪಿ ಹಾಗೂ ಜಿಲ್ಲಾಡಳಿತದಿಂದ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ ಕೇಂದ್ರದ ಗೃಹ ಸಚಿವರು, ಉಪರಾಷ್ಟ್ರಪತಿ ಸೇರಿದಂತೆ ಕೇಂದ್ರದ ಅನೇಕ ಸಚಿವರುಗಳು ಆಗಮಿಸುವ ನಿರೀಕ್ಷೆ ಇದೆ. ಹೀಗಾಗಿ ಅವರಿಗೆ ಸೂಕ್ತ ಭದ್ರತೆ ಹಿನ್ನೆಲೆಯಲ್ಲಿ ಮೈದಾನವನ್ನು ಪರಿಶೀಲಿಸಲಾಗಿದೆ. ಮಂಗಳವಾರ ಎರಡೂವರೆ ಗಂಟೆಗಳ ಕಾಲ ದರ್ಶನಕ್ಕೆ ಅವಕಾಶವಿರಲಿದೆ ಎಂದರು.
ಇಂದು ಸಂಜೆ 8.30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅನಂತ ಕುಮಾರ್ ಅವರಿಗೆ ಅಂತಿಮ ನಮನ ಸಲ್ಲಿಸಲು ಬರುವ ಮಾಹಿತಿ ಸಿಕ್ಕಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.