ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಈ ಶೈಕ್ಷಣಿಕ ವರ್ಷದಲ್ಲಿ ಬಣ್ಣ–ಬಣ್ಣದ ಸಮವಸ್ತ್ರದಲ್ಲಿ ಮಿಂಚಲಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಶಾಲಾ ಮಕ್ಕಳ ಸಮವಸ್ತ್ರವು ಈ ಶೈಕ್ಷಣಿಕ ವರ್ಷ ಒಂದೇ ಬಣ್ಣದಲ್ಲಿರುವುದಿಲ್ಲ.
ಸಾರ್ವಜನಿಕ ಶಿಕ್ಷಣ ಇಲಾಖೆಯು ಆಯಾ ಶಾಲೆಗಳ ಸಮವಸ್ತ್ರದ ಬಣ್ಣವನ್ನು ಆಯ್ಕೆ ಮಾಡಿಕೊಳ್ಳುವ ಸ್ವಾತಂತ್ರ್ಯವನ್ನು ಆಯಾ ಶಾಲಾ ಅಭಿವೃದ್ಧಿ ಮತ್ತು ನಿರ್ವಹಣಾ ಸಮಿತಿಗಳಿಗೆ (ಎಸ್‌ಡಿಎಂಸಿ) ನೀಡಿದೆ. ಈ ನಿಯಮ ಈ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸಲಿದೆ.
‘ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಎಸ್‌ಡಿಎಂಸಿಗಳಿಗೆ ಅನುದಾನ ಬಿಡುಗಡೆಯಾಗುವುದು ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಸಮವಸ್ತ್ರಗಳಿಗೆ ಆರ್ಡರ್ ನೀಡಲು ಸಾಧ್ಯವಾಗಿಲ್ಲ. ಹೀಗಾಗಿ, ಎರಡನೇ ಜೋಡಿ ಸಮವಸ್ತ್ರದ ಹಣವನ್ನು ಮಾತ್ರ ಈಗ ಇಲಾಖೆಯು ಎಸ್‌ಡಿಎಂಸಿಗಳಿಗೆ ವರ್ಗಾಯಿಸಿದ್ದು, ತಮ್ಮ ಆಯ್ಕೆಯ ಬಣ್ಣದ ಸಮವಸ್ತ್ರಗಳನ್ನು ಹೊಲಿಸಿ, ವಿದ್ಯಾರ್ಥಿಗಳಿಗೆ ವಿತರಿಸುವಂತೆ ಸೂಚಿಸಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.
ರಾಜ್ಯಸರ್ಕಾರವು ಪ್ರತಿ ವಿದ್ಯಾರ್ಥಿಗೆ, ಒಂದು ಸಮವಸ್ತ್ರಕ್ಕೆ ₹250 ಖರ್ಚು ಮಾಡುತ್ತದೆ. ಅಂದರೆ, ಈ ಉದ್ದೇಶಕ್ಕೆ ಸರ್ಕಾರ ₹100 ಕೋಟಿಗೂ ಹೆಚ್ಚು ಖರ್ಚು ಮಾಡುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.