ADVERTISEMENT

ನ್ಯಾಷನಲ್‌ ಹೆರಾಲ್ಡ್‌ಗೆ ದೇಣಿಗೆ: ಇ.ಡಿ ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್‌

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2022, 20:55 IST
Last Updated 7 ನವೆಂಬರ್ 2022, 20:55 IST
ಡಿ.ಕೆ. ಸುರೇಶ್‌
ಡಿ.ಕೆ. ಸುರೇಶ್‌   

ನವದೆಹಲಿ:ನ್ಯಾಷನಲ್ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿ ಗಳುಕಾಂಗ್ರೆಸ್‌ ಸಂಸದ ಡಿ.ಕೆ. ಸುರೇಶ್ ಅವರನ್ನು ಸೋಮವಾರ ಸುಮಾರು 5 ತಾಸು ವಿಚಾರಣೆ ನಡೆಸಿದರು.

ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆಕೆಪಿಸಿಸಿ ಅಧ್ಯಕ್ಷಡಿ.ಕೆ. ಶಿವಕುಮಾರ್, ಡಿ.ಕೆ.ಸುರೇಶ್ ಅವರಿಗೆ ಇ.ಡಿ.ಸಮನ್ಸ್‌ ನೀಡಿತ್ತು. ವಿಚಾರಣೆಗೆ ಹಾಜರಾಗಲು ಮೂರು ವಾರಗಳ ಕಾಲಾವಕಾಶ ನೀಡಬೇಕು ಎಂದು ಶಿವಕುಮಾರ್‌ ಕೋರಿದ್ದರು. ಹಾಗಾಗಿ, ಅವರು ಸೋಮವಾರ ವಿಚಾರಣೆಗೆ ಹಾಜರಾಗಿಲ್ಲ. ಅವರಿಗೆ ಇ.ಡಿ. ಮತ್ತೆ ಸಮನ್ಸ್‌ ನೀಡಲಿದೆ.

ನ್ಯಾಷನಲ್‌ ಹೆರಾಲ್ಡ್‌ನ ಮಾತೃ ಸಂಸ್ಥೆಯಾದ ಯಂಗ್‌ ಇಂಡಿಯಾಲಿಮಿಟೆಡ್‌ಗೆ ಶಿವಕುಮಾರ್ ಮತ್ತುಸುರೇಶ್ ದೇಣಿಗೆ ನೀಡಿರುವ ಪ್ರಕರಣ ಇದಾಗಿದೆ. ಸುರೇಶ್ ಅವರು ಯಂಗ್‌ ಇಂಡಿಯಾ ಸಂಸ್ಥೆಗೆ ಈ ವರ್ಷ ₹25 ಲಕ್ಷ ದೇಣಿಗೆ ನೀಡಿದ್ದಾರೆ.

ADVERTISEMENT

ವಿಚಾರಣೆ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಡಿ.ಕೆ. ಸುರೇಶ್‌, ‘ಇ.ಡಿ. ಅಧಿಕಾರಿಗಳುಯಂಗ್ ಇಂಡಿಯಾಗೆ ಸಂಬಂಧಿಸಿದ ಮಾಹಿತಿ ಕೇಳಿದ್ದಾರೆ. ದೇಣಿಗೆ ಹಣ ಯಾಕೆ ಪಾವತಿ ಮಾಡಿದ್ದೀರಿ ಹಾಗೂ ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ್ದಾರೆ. ಎಲ್ಲ ಮಾಹಿತಿ ನೀಡಿದ್ದೇನೆ. ಕೆಲವು ದಾಖಲೆಗಳನ್ನು ಕೇಳಿದ್ದಾರೆ. ಎಲ್ಲ ದಾಖಲೆಗಳನ್ನು 3–4 ದಿನಗಳಲ್ಲಿ ನೀಡುವುದಾಗಿ ಹೇಳಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.