ADVERTISEMENT

ನಕ್ಸಲ್ ನಾಯಕ ವಿಕ್ರಮ್‌ ಗೌಡ ಎನ್‌ಕೌಂಟರ್: ಗೃಹ ಸಚಿವ ಪರಮೇಶ್ವರ ಪ್ರತಿಕ್ರಿಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ನವೆಂಬರ್ 2024, 9:39 IST
Last Updated 19 ನವೆಂಬರ್ 2024, 9:39 IST
   

ಬೆಂಗಳೂರು: ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ನಾಯಕ ವಿಕ್ರಮ್‌ ಗೌಡ ಹತನಾಗಿದ್ದಾನೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ಕಳೆದ 20 ವರ್ಷಗಳಿಂದ ನಕ್ಸಲ್ ನಾಯಕ ವಿಕ್ರಂ ಗೌಡ ತಲೆಮರೆಸಿಕೊಂಡಿದ್ದ. ಆತನನ್ನು ಸೆರೆಹಿಡಿಯಲು ಸಾಧ್ಯವಾಗಿರಲಿಲ್ಲ. ಆತನ ಚಲನವಲನಗಳ ಬಗ್ಗೆ ಪೊಲೀಸರು ನಿಗಾ ಇಟ್ಟಿದ್ದರು. ಕಳೆದ ವಾರ ಲತಾ ಮತ್ತು ರಾಜು ಎಂಬ ಇಬ್ಬರು ನಕ್ಸಲರ ಸುಳಿವು ಸಿಕ್ಕಿದ್ದು, ಈ ವೇಳೆ ವಿಕ್ರಮ್‌ ಗೌಡ ಇರುವ ಮಾಹಿತಿ ಪೊಲೀಸರಿಗೆ ಲಭಿಸಿದೆ’ ಎಂದರು.

‘ಮಾಹಿತಿ ಆಧರಿಸಿ ಹೆಬ್ರಿಯಲ್ಲಿ ಕೊಂಬಿಂಗ್ ಕಾರ್ಯಾಚರಣೆ ನಡೆಸಲಾಗಿತ್ತು. ಈ ವೇಳೆ ನಕ್ಸಲರ ಗುಂಪು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆಸಿದ ಎನ್‌ಕೌಂಟರ್‌ನಲ್ಲಿ ವಿಕ್ರಮ್‌ ಗೌಡ ಮೃತಪಟ್ಟನು’ ಎಂದು ತಿಳಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.