ಬೆಂಗಳೂರು: ದಂತ ವೈದ್ಯಕೀಯ ಹಾಗೂ ಆಯುಷ್ ಕೋರ್ಸಗಳ ಮಾಪ್‌ಅಪ್ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ.
ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಂಡು ಕಾಲೇಜಿಗೆ ವರದಿ ಮಾಡಿಕೊಳ್ಳಲು ಅ.30ರವರೆಗೆ ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ವೈದ್ಯಕೀಯ ಕೋರ್ಸ್‌ನ ‘ಸ್ಟ್ರೇ ವೇಕೆನ್ಸಿ’ ಸುತ್ತಿನಲ್ಲಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆಪ್ಷನ್ ದಾಖಲಿಸಲು ಅ. 29ರ ಬೆಳಿಗ್ಗೆ 10ರವರೆಗೆ ಅವಕಾಶ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.