ADVERTISEMENT

ನೀಟ್‌, ಸಿಇಟಿ: ಎರಡನೇ ಸುತ್ತಿನ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 15:53 IST
Last Updated 24 ಸೆಪ್ಟೆಂಬರ್ 2024, 15:53 IST
ನೀಟ್‌
ನೀಟ್‌   

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ (ಸಿಇಟಿ, ನೀಟ್‌) ಎರಡನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಕಾಲೇಜಿಗೆ ಪ್ರವೇಶ ಪಡೆಯಲು ಸೆ. 28ರವರೆಗೆ ಅವಕಾಶ ನೀಡಲಾಗಿದೆ.

ಸಿಇಟಿ ವಿದ್ಯಾರ್ಥಿಗಳಿಗೆ ‘ಚಾಯ್ಸ್‌’ ದಾಖಲಿಸಲು ಸೆ. 26ರವರೆಗೆ, ಶುಲ್ಕ ಪಾವತಿ ಮತ್ತು ದಾಖಲೆ ಸಲ್ಲಿಸಲು 27ರವರೆಗೆ ಅವಧಿ ವಿಸ್ತರಿಸಲಾಗಿದೆ.

ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್‌ ಕೋರ್ಸ್‌ಗಳಿಗೆ ಚಾಯ್ಸ್‌ ದಾಖಲಿಸಲು ಅವಕಾಶ ಇಲ್ಲ. ಆದರೆ, ಶುಲ್ಕ‌ ಪಾವತಿ, ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಂಡು ಪ್ರವೇಶ ಪಡೆಯಲು ಸೆ. 27 ಮತ್ತು 28 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.