ಬೆಂಗಳೂರು: ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಮಾಪ್‌ಅಪ್ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬುಧವಾರ ಪ್ರಕಟಿಸಿದೆ.
ಆಕ್ಷೇಪಣೆಗಳು ಇದ್ದಲ್ಲಿ ಅ.17ರ ಮಧ್ಯಾಹ್ನ 1ರ ಒಳಗೆ ಇ-ಮೇಲ್ ಮೂಲಕ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಮಾಪ್‌ಅಪ್ ಸುತ್ತಿನಲ್ಲಿ ಹಂಚಿಕೆಗೆ ಇದ್ದ 710 ವೈದ್ಯಕೀಯ ಸೀಟುಗಳಲ್ಲಿ ಆಡಳಿತ ಮಂಡಳಿ ಕೋಟಾದ 70 ಸೀಟು ಹೊರತುಪಡಿಸಿ ಉಳಿದ ಎಲ್ಲ ಸೀಟುಗಳನ್ನೂ ಹಂಚಿಕೆ ಮಾಡಲಾಗಿದೆ ಎಂದು ಅವರು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.