ಬೆಂಗಳೂರು: ‘ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲ. ಹೀಗಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕೇಂದ್ರದ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇಲ್ಲಿ ನೀತಿಯೇ ಇಲ್ಲ. ಬಜೆಟ್‌ನಲ್ಲಿ ಕರ್ನಾಟಕಕ್ಕೆ ಸರಿಯಾದ ಪ್ರಾತಿನಿಧ್ಯ ಸಿಗದ ಕಾರಣ, ಸಭೆ ಬಹಿಷ್ಕರಿಸಲು ನಮ್ಮ ನಾಯಕರು ತೀರ್ಮಾನಿಸಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.