ADVERTISEMENT

ನೇಹಾ ಕೊಲೆ ಪ್ರಕರಣ: ಡಿಎನ್‌ಎ ಪರೀಕ್ಷೆಗೆ ಆರೋ‍ಪಿ ಫಯಾಜ್‌ ರಕ್ತದ ಮಾದರಿ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2024, 11:17 IST
Last Updated 27 ಏಪ್ರಿಲ್ 2024, 11:17 IST
ಫಯಾಜ್‌ (ಆರೋಪಿ)
ಫಯಾಜ್‌ (ಆರೋಪಿ)   

ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್‌ನನ್ನು ಇಲ್ಲಿನ ಒಂದನೇ ಸೇಷನ್ಸ್‌ ಕೋರ್ಟ್‌ಗೆ ಶನಿವಾರ ಹಾಜರು ಪಡಿಸಿದ ಸಿಐಡಿ ಅಧಿಕಾರಿಗಳು, ನ್ಯಾಯಾಧೀಶರ ಸಮ್ಮುಖದಲ್ಲಿ ಡಿಎನ್‌ಎ ಪರೀಕ್ಷೆಗೆ ರಕ್ತದ ಮಾದರಿ ಸಂಗ್ರಹಿಸಿದರು.

ಪ್ರಕರಣದ ಹೆಚ್ಚಿನ ತನಿಖೆಗೆ ಆರೋಪಿ ಫಯಾಜ್‌ನ ಡಿಎನ್‌ಎ ಪರೀಕ್ಷೆಗೆ ಒಳಪಡಿಸಲು ಅನುಮತಿ ನೀಡಬೇಕು ಎಂದು ತನಿಖಾಧಿಕಾರಿಗಳು ಶನಿವಾರ ಬೆಳಿಗ್ಗೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿ ಪರಿಗಣಿಸಿದ ಹಿನ್ನೆಲೆಯಲ್ಲಿ ಆರೋಪಿಯನ್ನು ಮಧ್ಯಾಹ್ನ ನ್ಯಾಯಾಲಯಕ್ಕೆ ಹಾಜರು ಪಡಿಸಿ, ವೈದ್ಯರಿಂದ ರಕ್ತದ ಮಾದರಿ ಸಂಗ್ರಹಿಸಲಾಯಿತು.

ಕೊಲೆ ನಡೆದ ಸ್ಥಳದಲ್ಲಿ ಹಾಗೂ ಆರೋಪಿ ಕೃತ್ಯಕ್ಕೆ ಬಳಸಿದ ಚಾಕುವಿನ ಮೇಲೆ ರಕ್ತದ ಎರಡು ಗುಂಪಿನ ಮಾದರಿ ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಫಯಾಜ್‌ನ ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.