ಬೆಂಗಳೂರು: ಭಾರತದಲ್ಲಿ ಪ್ರಜಾಪ್ರಭುತ್ವ ಸುಭದ್ರವಾಗಿರಲು ದೇಶದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರೂ ಕಾರಣ. ಅವರೊಬ್ಬ ಮಹಾನ್ ಪ್ರಜಾಪ್ರಭುತ್ವವಾದಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ ಪುಣ್ಯತಿಥಿ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಭಾವಚಿತ್ರಕ್ಕೆ ಶನಿವಾರ ಪುಷ್ಪನಮನ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ದೇಶದ ಪ್ರಧಾನಿಯಾಗಿ 17 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ನೆಹರೂ, ಭಾರತವನ್ನು ಆಧುನಿಕಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ದೇಶದಲ್ಲಿ ಪ್ರಜಾಪ್ರಭುತ್ವ, ಸಾರ್ವಭೌಮತೆ ಉಳಿದಿದ್ದರೆ ಅದಕ್ಕೆ ಅವರ ಕೊಡುಗೆ ದೊಡ್ಡದು ಎಂದರು.
‘ನೆಹರೂ ಅವರು ಹಾಕಿದ್ದ ಅಡಿಪಾಯದ ಆಧಾರದಲ್ಲಿ ದೇಶವು ಬಲವಾಗಿ ಬೆಳೆದಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದರು. ಅವರ ತ್ಯಾಗ ಬಲಿದಾನಗಳನ್ನು ದೇಶವು ಸ್ಮರಿಸಬೇಕಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.