ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಪರಿಚಯಿಸಿದ್ದ ಕಡ್ಡಾಯ ವಿಷಯಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕನಿಷ್ಠ 10 ಕೃಪಾಂಕ ನೀಡಿ, ತೇರ್ಗಡೆಗೊಳಿಸಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ.
2021-22ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಣ ನೀತಿ ಪರಿಚಯಿಸಿದ ನಂತರ ವಿಶ್ವವಿದ್ಯಾಲಯಕ್ಕೆ ಸಂಯೋಜಿತವಾಗಿರುವ ಕಾಲೇಜುಗಳಲ್ಲಿ ಪದವಿ ಕೋರ್ಸ್‌ಗಳಿಗೆ ದಾಖಲಾಗಿದ್ದ 855 ವಿದ್ಯಾರ್ಥಿಗಳು ಕಡ್ಡಾಯ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದರು. ಅಂತಹ ವಿದ್ಯಾರ್ಥಿಗಳಿಗೆ 10 ಕೃಪಾಂಕಗಳನ್ನು ನೀಡಲಾಗುತ್ತಿದೆ.
ಎನ್‌ಇಪಿ ನಿಯಮದಂತೆ ಕ್ರೀಡೆ, ದೈಹಿಕ ಶಿಕ್ಷಣ, ಸಾಂಸ್ಕೃತಿಕ ಚಟುವಟಿಕೆಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಆರೋಗ್ಯ ಮತ್ತು ಕ್ಷೇಮ, ಯೋಗ ವಿಷಯಗಳನ್ನು ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಲಾಗಿತ್ತು.
ಈ ವಿಷಯಗಳಲ್ಲಿ ವಿದ್ಯಾರ್ಥಿಗಳ ಕಾರ್ಯಕ್ಷಮತೆಯ ಆಧಾರದ ಮೇಲೆ ಪ್ರಾಧ್ಯಾಪಕರು ಮೌಲ್ಯಮಾಪನ ಮಾಡಬೇಕಾಗಿತ್ತು. ಆದರೆ, ಸ್ಪಷ್ಟ ಮಾರ್ಗಸೂಚಿಗಳಿಲ್ಲದೆ, ಮೌಲ್ಯಮಾಪಕರು 10ಕ್ಕಿಂತ ಕಡಿಮೆ ಅಂಕಗಳನ್ನು ನೀಡಿದ್ದರಿಂದ ಹಲವು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದರು ಎಂದು ವಿಶ್ವವಿದ್ಯಾಲಯದ ಅಧಿಕಾರಿಗಳು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.