ADVERTISEMENT

ಕೊಡಗಿಗೆ ಚಾರುಲತಾ ಸೋಮಲ್‌ ನೂತನ ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 11:52 IST
Last Updated 23 ಜನವರಿ 2021, 11:52 IST
ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಹೂವುಗುಚ್ಛ ನೀಡಿ ಸ್ವಾಗತಿಸಲಾಯಿತು
ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಹೂವುಗುಚ್ಛ ನೀಡಿ ಸ್ವಾಗತಿಸಲಾಯಿತು   

ಮಡಿಕೇರಿ: ಕೊಡಗು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಚಾರುಲತಾ ಸೋಮಲ್ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಪ್ರಭಾರ ಜಿಲ್ಲಾಧಿಕಾರಿ ಆಗಿ‌ ಕಾರ್ಯ ನಿರ್ವಹಿಸುತ್ತಿದ್ದ ಭನ್ವರ್ ಸಿಂಗ್ ಮೀನಾ ಅವರಿಂದ ಅಧಿಕಾರ ಸ್ವೀಕರಿಸಿದರು.

ಚಾರುಲತಾ ಸೋಮಲ್, ಈ ಹಿಂದೆ ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯ ನಿರ್ವಹಿಸಿದ್ದರು. ಮತ್ತೆ ಕೊಡಗು ಜಿಲ್ಲೆಗೇ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಜಿಲ್ಲಾಧಿಕಾರಿ ಆಗಿದ್ದ ಅನೀಸ್‌ ಕಣ್ಮಣಿ ಜಾಯ್‌ ಅವರು, ಸುದೀರ್ಘ ರಜೆಯ ಮೇಲೆ ವಿದೇಶಕ್ಕೆ ತೆರಳಿದ್ದು ಅವರ ಜಾಗಕ್ಕೆ ಚಾರುಲತಾ ಸೋಮಲ್‌ ನೇಮಕವಾಗಿದೆ.

ADVERTISEMENT

ಚಾರುಲತಾ ಅವರು ಸಿಇಒ ಆಗಿದ್ದ ವೇಳೆ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ ನ್ಯಾಯಾಲಯ ಸಂಕೀರ್ಣಕ್ಕೆ ಜಾಗ ಒದಗಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಇದೀಗ ನಗರದ ಹೊರ ವಲಯದಲ್ಲಿ ಜಿಲ್ಲಾ ಪಂಚಾಯಿತಿ ಕಟ್ಟಡ ಹಾಗೂ ನ್ಯಾಯಾಲಯ ಸಂಕೀರ್ಣ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.