ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ಸ್ಟಾರ್ಟ್‌ಅಪ್‌ಗಳಿಗೆ ಕೆಲವೊಂದು ಯೋಜನೆಗಳನ್ನು ನೀಡಿದ್ದಾರೆ.
ಎಲಿವೇಟ್ ಯೋಜನೆಯ ಪ್ರಮುಖಾಂಶಗಳು:
*ಎಲಿವೇಟ್ (ELEVATE) ಯೋಜನೆ ಅಡಿಯಲ್ಲಿ ಈಗಾಗಲೇ 93 ಸ್ಟಾರ್ಟ್‌ಅಪ್‌ಗಳನ್ನು ಗುರುತಿಸಿ, ಪ್ರೋತ್ಸಾಹ ನೀಡಲಾಗುತ್ತಿದೆ.
* ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲಿ ಅತ್ಯಾಧುನಿಕ ಸ್ಟಾರ್ಟ್‌ಆಪ್ ಪಾರ್ಕ್ ಅನ್ನು 30 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
* ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಗಳನ್ನು ಜನಸಾಮಾನ್ಯರಿಗೆ ಪರಿಚಯಿಸಲು ಹಾಗೂ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಚಿಂತನೆ ಮತ್ತು ಅರಿವು ಮೂಡಿಸಲು 6 ಸ್ಥಳಗಳಲ್ಲಿ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರಗಳನ್ನು ಉನ್ನತೀಕರಿಸಲಾಗುವುದು.
* ರಾಜ್ಯದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಯನ್ನು ಪ್ರೋತ್ಸಾಹಿಸಲಾಗುವುದು. ಹಿತಾಸಕ್ತರಿಂದ ಅವಶ್ಯಕ ಬೆಂಬಲ ಪಡೆದು, ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಸಂಬಂಧಿಸಿದ ಇಲಾಖೆಗಳಲ್ಲಿ ಸಮನ್ವಯ ಸಾಧಿಸಲು ಕರ್ನಾಟಕ ರಾಜ್ಯ ಸಂಶೋಧನಾ ಕೇಂದ್ರವನ್ನು ಸ್ಥಾಪಿಸಲಾಗುವುದು.
* ಬೆಂಗಳೂರಿನ ಬಯೋ-ಇನೋವೇಶನ್ ಸೆಂಟರ್ (ಬಿಐಸಿ) ಮತ್ತು ಸಾಂಕ್ರಾಮಿಕ ರೋಗಗಳ ಸಂಶೋಧನಾ ಪ್ರತಿಷ್ಠಾನ (ಐಡಿಆರ್‌ಎಫ್) ಸಹಯೋಗದೊಂದಿಗೆ ಸಾಂಕ್ರಾಮಿಕತೆ ತಡೆಗಟ್ಟುವ ಕೇಂದ್ರವನ್ನು ಸ್ಥಾಪಿಸಲು ಮೊದಲ ಹಂತದಲ್ಲಿ ಸರ್ಕಾರವು ₹10 ಕೋಟಿ ಬೆಂಬಲ ನೀಡಲು ಸರ್ಕಾರ ನಿರ್ಧರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.