ಬೆಂಗಳೂರು: ಕೇರಳ ಹೈಕೋರ್ಟ್‌ನಿಂದ ಕರ್ನಾಟಕ ಹೈಕೋರ್ಟ್‌ಗೆ ವರ್ಗಾವಣೆಯಾಗಿರುವ ನ್ಯಾಯಮೂರ್ತಿ ಅನು ಶಿವರಾಮನ್ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್ ಗೆಹಲೋತ್, ನ್ಯಾಯಮೂರ್ತಿ ಅನು ಶಿವರಾಮನ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್ ಉಪಸ್ಥಿತರಿದ್ದರು.
ಅನು ಶಿವರಾಮನ್ 1996ರ ಮೇ 25ರಂದು ಕೇರಳದ ಎರ್ನಾಕುಲಂನಲ್ಲಿ ಜನಿಸಿದ್ದು, 1991ರಲ್ಲಿ ಎರ್ನಾಕುಲಂ ಸರ್ಕಾರಿ ಕಾನೂನು ಕಾಲೇಜಿನಿಂದ ಕಾನೂನು ಪದವಿ ಪಡೆದಿದ್ದಾರೆ. 1991ರ ಮಾರ್ಚ್ 9ರಂದು ಸನ್ನದು ನೋಂದಣಿ ಮಾಡಿಸಿ ವೃತ್ತಿ ಆರಂಭಿಸಿದ್ದರು. 2015ರ ಏಪ್ರಿಲ್ 10ರಂದು ಕೇರಳ ಹೈಕೋರ್ಟ್ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡು, 2017ರ ಏಪ್ರಿಲ್ 5ರಂದು ಕಾಯಂಗೊಂಡಿದ್ದರು. ಸದ್ಯ ಕರ್ನಾಟಕ ಹೈಕೋರ್ಟ್ ಹಾಲ್-2ರಲ್ಲಿ ಕಲಾಪ ನಡೆಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.