ವಿಜಯದಶಮಿ ದಿನವಾದ ಮಂಗಳವಾರ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಜಂಬೂಸವಾರಿ ನಡೆದಿದ್ದು, ಲಕ್ಷಾಂತರ ಮಂದಿ ಗಜಪಡೆಯ ಮೆರವಣಿಗೆಯನ್ನು ಕಣ್ತುಂಬಿಕೊಂಡರು. ಮಧ್ಯಾಹ್ನ 1.45ಕ್ಕೆ ಅರಮನೆ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಜಂಬೂ ಸವಾರಿ ಮೆರವಣಿಗೆಯು ಆರಂಭಗೊಂಡಿತು. 49 ಸ್ತಬ್ಧಚಿತ್ರಗಳು, 50ಕ್ಕೂ ಹೆಚ್ಚು ಕಲಾತಂಡಗಳು ತಮ್ಮ ಪ್ರದರ್ಶನದ ಮೂಲಕ ರಾಜ್ಯದ ಸಾಂಸ್ಕೃತಿಕ ಹಿರಿಮೆಯನ್ನು ಬಿಂಬಿಸಿದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.