News Express: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಆಗಿದ್ದ ಕೆ.ಟಿ. ಶ್ರೀಕಂಠೇಗೌಡ ಮೈಸೂರಿನ ಆಲಮ್ಮ ಕಲ್ಯಾಣ ಮಂಟಪದಲ್ಲಿ ಗುರುವಾರ ತಮ್ಮ ಬೆಂಬಲಿಗರೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಜೆಡಿಎಸ್ ನ ಕೆಲವು ಕಾರ್ಯಕರ್ತರು ಗದ್ದಲ ಎಬ್ಬಿಸಿದರು. ನಂತರ, ನಾಮಪತ್ರ ಸಲ್ಲಿಸದಂತೆ ಒತ್ತಾಯಿಸಿ ಶ್ರೀಕಂಠೇಗೌಡರನ್ನು ಎಳೆದಾಡಿದರು. ಇದರಿಂದ ಅವರು ಗಾಯಗೊಂಡು ಆಸ್ಪತ್ರೆ ಸೇರಿದ್ದು ನಾಮಪತ್ರ ಸಲ್ಲಿಸಲು ಆಗಲಿಲ್ಲ. ಕ್ಷೇತ್ರದಿಂದ ಜೆಡಿಎಸ್- ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಯಾಗಿ ವಿವೇಕಾನಂದ ಅವರಿಗೆ ಪಕ್ಷವು ಬಿ ಫಾರಂ ನೀಡಿತ್ತು. ಇದರಿಂದ ಬೇಸರಗೊಂಡಿದ್ದ ಶ್ರೀಕಂಠೇಗೌಡ ಪಕ್ಷೇತರರಾಗಿ ಸ್ಪರ್ಧಿಸುವ ಆಶಯದೊಂದಿಗೆ ಗುರುವಾರ ಸಭೆ ನಡೆಸಿದ್ದರು. ಈ ವೇಳೆ ಗದ್ದಲ ಏರ್ಪಟ್ಟು ಅವರು ಆಸ್ಪತ್ರೆ ಸೇರಿದರು. ನಾಮಪತ್ರ ಸಲ್ಲಿಕೆಗೆ ಗುರುವಾರ ಕಡೆಯ ದಿನವಾಗಿತ್ತು. ಇದರ ಜೊತೆಗೆ, ದಿನದ ಪ್ರಮುಖ ವಿದ್ಯಮಾನಗಳು ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.