ನವದೆಹಲಿ: ಕರ್ನಾಟಕದಲ್ಲಿ 2022ರ ಜುಲೈನಲ್ಲಿ ನಡೆದಿದ್ದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿದಂತೆ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿದೆ.
ಬಂಧಿತ ಆರೋಪಿ ರಿಯಾಜ್ ಯೂಸಫ್ ಹಾರಳ್ಳಿ ಅಲಿಯಾಸ್ ರಿಯಾಜ್ ಎಂಬುವನಾಗಿದ್ದು, ವಿದೇಶಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎಂದು ಎನ್‌ಐಎ ಪ್ರಕಟಣೆಯಲ್ಲಿ ತಿಳಿಸಿದೆ.
ರಿಯಾಜ್ ಬಂಧನವೂ ಸೇರಿದಂತೆ ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ಬಂಧಿತ ಆರೋಪಿಗಳ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.