ಬೆಂಗಳೂರು: ಕೋವಿಡ್–19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣದಿಂದ ಡಿಸೆಂಬರ್ 28ರಿಂದ ಮತ್ತೆ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಕುರಿತು ಹೊಸ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಇದರ ಪ್ರಕಾರ ರಾತ್ರಿ ವೇಳೆ ಸಂಚಾರಕ್ಕಿರುವ ನಿರ್ಬಂಧಗಳೇನೇನು? ಇಲ್ಲಿದೆ ಮಾಹಿತಿ.
* ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೂ ಕರ್ಫ್ಯೂ ಜಾರಿಯಲ್ಲಿರಲಿದೆ.
* ತುರ್ತು ಅಗತ್ಯಗಳನ್ನು ಹೊರತು ಪಡಿಸಿ ಉಳಿದಂತೆ ಸಾರ್ವಜನಿಕರ ಸಂಚಾರಕ್ಕೆ ನಿರ್ಬಂಧ.
* ರೋಗಿಗಳು ಮತ್ತು ಅವರ ಸಹಾಯಕರ ತುರ್ತು ಸಂಚಾರಕ್ಕೆ ಅವಕಾಶ.
* ಸಂಸ್ಥೆಗಳಲ್ಲಿ ರಾತ್ರಿ ಪಾಳಿಯ ಉದ್ಯೋಗಿಗಳು ಕಂಪನಿಯ ಗುರುತಿನ ಚೀಟಿಯೊಂದಿಗೆ ಸಂಚರಿಸಲು ಅವಕಾಶವಿದೆ.
* ಇಂಟರ್‌ನೆಟ್ ಸೇವೆಗಳು ಮತ್ತು ದೂರಸಂಪರ್ಕ ಸೇವೆ ಕಂಪನಿಗಳ ಉದ್ಯೋಗಿಗಳು, ವಾಹನಗಳ ಸಂಚಾರಕ್ಕೆ ಅವಕಾಶ (ಐಡಿ ಕಾರ್ಡ್ ಇರಬೇಕು).
* ವೈದ್ಯಕೀಯ, ಔಷಧ ಮಳಿಗೆಗಳು ಸೇರಿ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಇತರೆ ವಾಣಿಜ್ಯ ಚಟುವಟಿಕೆಗಳಿಗೆ ನಿರ್ಬಂಧ.
* ಸಾರ್ವಜನಿಕ ಸಾರಿಗೆ, ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಅವಕಾಶವಿದೆ.
ಇಷ್ಟೇ ಅಲ್ಲದೆ, ಕೋವಿಡ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕೆಲವು ಇತರ ನಿರ್ಬಂಧಗಳನ್ನೂ ವಿಧಿಸಲಾಗಿವೆ. ಅವುಗಳು ಹೀಗಿವೆ;
* ಡಿಸೆಂಬರ್ 30ರಿಂದ 2022ರ ಜನವರಿ 2ರ ವರೆಗೂ ರೆಸ್ಟೊರೆಂಟ್, ಬಾರ್, ಪಬ್ ಹಾಗೂ ಹೋಟೆಲ್‌ಗಳಲ್ಲಿ ಸಾಮರ್ಥ್ಯದ ಶೇ 50ರಷ್ಟು ಆಸನಗಳ ಭರ್ತಿಗೆ ಅವಕಾಶ.
* ಮದುವೆ ಸೇರಿದಂತೆ ಇತರೆ ಸಭೆ ಸಮಾರಂಭಗಳಲ್ಲಿ ಭಾಗಿಯಾಗುವವರ ಸಂಖ್ಯೆ 300 ಜನರನ್ನು ಮೀರುವಂತಿಲ್ಲ.
* ಮಹಾರಾಷ್ಟ್ರ ಮತ್ತು ಕೇರಳ ಗಡಿ ಭಾಗಗಳಲ್ಲಿ ಓಮೈಕ್ರಾನ್ ಸೋಂಕು ತಡೆಗೆ ಕಠಿಣ ನಿಗಾವಹಿಸಲಾಗುತ್ತದೆ.
***
ಡಿಸೆಂಬರ್ 28ರಿಂದ ಪ್ರತಿ ದಿನ ರಾತ್ರಿ 10ರಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ ಆಧರಿಸಿ ಹತ್ತು ದಿನಗಳ (ಜನವರಿ 7) ಬಳಿಕ ಮುಂದಿನ ಕ್ರಮದ ಕುರಿತು ನಿರ್ಧರಿಸಲಾಗುವುದು.
– ಡಾ.ಕೆ.ಸುಧಾಕರ್, ಆರೋಗ್ಯ ಸಚಿವ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.