ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಇಲ್ಲಿನ ಜೆ.ಪಿ. ಭವನದಲ್ಲಿ ನಡೆದ ಸಭೆಯ ಬಳಿಕ ನಿಖಿಲ್ ಅವರ ಹೆಸರನ್ನು ದೇವೇಗೌಡ ಘೋಷಣೆ ಮಾಡಿದರು.
‘ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಖಿಲ್ ಅವರನ್ನು ಅಭ್ಯರ್ಥಿಯಾಗಿ ಮಾಡಿದ್ದೇವೆ. ನಿಖಿಲ್ ನಾಳೆ ನಾಮಪತ್ರ ಸಲ್ಲಿಕೆ ಮಾಡುತ್ತಾರೆ. ಚನ್ನಪಟ್ಟಣದಲ್ಲೇ ಇದ್ದು ಚುನಾವಣಾ ಪ್ರಚಾರ ಮಾಡುತ್ತೇನೆ’ ಎಂದು ದೇವೇಗೌಡ ನುಡಿದರು.
‘ಬಿ.ಎಸ್. ಯಡಿಯೂರಪ್ಪ ಹಾಗೂ ಎಚ್.ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿ ಮೈತ್ರಿಕೂಟದ ಪರವಾಗಿ ಅಭ್ಯರ್ಥಿ ಹೆಸರು ಘೋಷಣೆ ಮಾಡಲಿದ್ದಾರೆ’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.