ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಯ ನಂತರ ಅಸಮಾಧಾನಗೊಂಡಿದ್ದ ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಅವರನ್ನು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುರುವಾರ ಭೇಟಿಯಾಗಿ ಮನವೊಲಿಸಿದರು.
‘ಕಂದಕೂರ ಅವರನ್ನು ಭೇಟಿಯಾಗಿ ಮಾತನಾಡಿದೆ. ಪ್ರಸಕ್ತ ಸನ್ನಿವೇಶದಲ್ಲಿ ಮೈತ್ರಿಯ ಅಗತ್ಯ ಕುರಿತು ಮನವರಿಕೆ ಮಾಡಲಾಗಿದೆ. ಕೆಲ ವಿಷಯಗಳ ಕುರಿತು ಕಳವಳ ವ್ಯಕ್ತಪಡಿಸಿದ್ದಾರೆ. ಅವುಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತಂದಿರುವೆ’ ಎಂದರು.
‘ಎಚ್.ಡಿ.ಕುಮಾರಸ್ವಾಮಿ ಅವರೂ ದೂರವಾಣಿ ಮೂಲಕ ಮಾತನಾಡಿದ್ದಾರೆ. ಬೇಸರಕ್ಕೆ ಕಾರಣವಾದ ಅಂಶಗಳನ್ನು ತಿಳಿದುಕೊಂಡಿದ್ದಾರೆ’ ಎಂದರು.
‘ನನ್ನ ಕಳವಳವನ್ನು ಪಕ್ಷದ ನಾಯಕರು ಅರ್ಥ ಮಾಡಿಕೊಂಡಿದ್ದಾರೆ. ಮಾತಿಗೆ ಮನ್ನಣೆ ನೀಡಿದ್ದಾರೆ. ಪಕ್ಷದ ನಾಯಕರ ಸೂಚನೆ ಪಾಲಿಸುವೆ. ಪಕ್ಷದ ಜತೆಗೆ ಇರುತ್ತೇನೆ’ ಎಂದು ಶರಣ ಗೌಡ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.