ಶಿವಮೊಗ್ಗ: ‘ರಾಗಿಗುಡ್ಡದಲ್ಲಿ ಭಾನುವಾರ ರಾತ್ರಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮುಸ್ಲಿಂ ಯುವಕ ಸಾವಿಗೀಡಾಗಿದ್ದಾನೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದು ಸುಳ್ಳು‘ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.
‘ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ‘ ಎಂದು ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಗಲಭೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಗಾಯಗೊಂಡವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಒಟ್ಟು 12 ಜನ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು‘ ಎಸ್ಪಿ ಹೇಳಿದರು.
‘ಘಟನೆಗೆ ಸಂಬಂಧಿಸಿದಂತೆ 60 ಜನರನ್ನು ಬಂಧಿಸಲಾಗಿದೆ. ಮತ್ತು ಕೆಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ‘ ಎಂದು ಮಿಥುನ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.