ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ಅವರು ಕಾಮನ್ ಮ್ಯಾನ್ ಸಿಎಂ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬೊಮ್ಮಾಯಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಬೇಕು ಎಂದು ಜನರೂ ಬಯಸಿದ್ದಾರೆ ಎಂದರು.
ಮುಂಬರುವ ವಿಧಾನಸಭಾ ಚುನಾವಣೆಯನ್ನು ಅವರ ನೇತೃತ್ವದಲ್ಲಿ ಎದುರಿಸಲಾಗುವುದು. ಮುಂದಿನ ಮುಖ್ಯಮಂತ್ರಿ ಅವರೇ ಆಗಲಿದ್ದಾರೆ ಎಂದರು.
ಇದಕ್ಕೆ ಧ್ವನಿ ಗೂಡಿಸಿರುವ ಕಂದಾಯ ಸಚಿವ ಆರ್.ಅಶೋಕ, ಯಾವ ಕಾರಣಕ್ಕೂ ಬೊಮ್ಮಾಯಿ ಬದಲಾವಣೆ ಇಲ್ಲ. ನಾಯಕತ್ವ ಬದಲಾವಣೆ ಎಂಬುದು ಊಹಾಪೋಹಗಳು. ಆದ್ದರಿಂದ ಮುಖ್ಯಮಂತ್ರಿ ಬದಲಾವಣೆ ಕನಸು ಕಾಣುವ ಅಗತ್ಯವಿಲ್ಲ. ಬೊಮ್ಮಾಯಿ ಅವರಿಗೆ ಕೇಂದ್ರ ಮಾಯಕರ ಆಶೀರ್ವಾದ ಇದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.