ADVERTISEMENT

ರಾಜ್ಯದ ಮೈತ್ರಿ ಸರ್ಕಾರಕ್ಕೆ ಅಪಾಯ ಇಲ್ಲ, ದೂರು ಕೊಟ್ಟಿಲ್ಲ: ಎಚ್‌.ಡಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 20 ಜೂನ್ 2019, 7:06 IST
Last Updated 20 ಜೂನ್ 2019, 7:06 IST
   

ಬೆಂಗಳೂರು: ರಾಜ್ಯ ಸರ್ಕಾರ ಚೆನ್ನಾಗಿ ಕೆಲಸ ಮಾಡುತ್ತಿದೆ. ಸರ್ಕಾರದ ವಿರುದ್ಧ ರಾಹುಲ್ ಗಾಂಧಿಗೆ ಯಾರೂ ದೂರು ಕೊಟ್ಟಿಲ್ಲ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.

ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನಿಂದ ಸರ್ಕಾರಕ್ಕೆ ಯಾವುದೇ ಅಪಾಯ ಆಗುವುದಿಲ್ಲ ಎಂದರು. ಪುರಸಭೆ, ಪಟ್ಟಣ ಪಂಚಾಯಿತಿ ಚುನಾವಣೆಗಳಿಗೆಸಿದ್ಧವಾಗುವಂತೆ ಹೇಳಿದ್ದೇನೆಯೇ ಹೊರತು ವಿಧಾನಸಭೆಗೆ ಮಧ್ಯಂತರ ಚುನಾವಣೆ ನಡೆಯುತ್ತದೆ ಎಂದು ಹೇಳಿಲ್ಲ ಎಂದರು.

ರಾಹುಲ್ ಗಾಂಧಿ ಅವರಿಗೆ ಆಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಒತ್ತಾಯಿಸಿದ್ದೇನೆ.ಸಿದ್ದರಾಮಯ್ಯ ಸಲಹೆ ಮೇರೆಗೆ ನಮ್ಮ ಪಕ್ಷದ ಪಾಲಿನ ಒಂದು ಸ್ಥಾನವನ್ನು ಪಕ್ಷೇತರ ಶಾಸಕರಿಗೆ ಬಿಟ್ಡುಕೊಡಲಾಗಿದೆ ಎಂದರು.

ADVERTISEMENT

ಕಳೆದ ವಿಧಾನಸಭಾ ಚುನಾವಣೆ ವೇಳೆ ನಾನು ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾಗಲಿ ಎಂದು ಹೇಳಿದ್ದೆ. ಆದರೆ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದರು. ಹೀಗಾಗಿ ಮೈತ್ರಿಯಿಂದ ಕಾಂಗ್ರೆಸ್ ಹಿತಾಸಕ್ತಿಗೆ ಧಕ್ಕೆಯಾಗಿದೆ ಎಂಬ ಮಾತಿಗೆ ಅರ್ಥವಿಲ್ಲ ಎಂದರು.

ಶುಕ್ರವಾರ ಸಭೆ: ಜೆಡಿಎಸ್ ಪಕ್ಷದ ಗೆದ್ದ ಜನನಾಯಕರ ಜತೆಗೆ ಸೋತ ಅಭ್ಯರ್ಥಿಗಳನ್ನು ಗುರುತಿಸಿ ಅವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಶುಕ್ರವಾರ ನಗರದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದೇವೇಗೌಡರು ತಿಳಿಸಿದರು.

ಎಚ್.ವಿಶ್ವನಾಥ್ ಅವರ ಮನವೊಲಿಸುವ ಕಾರ್ಯ ಮುಂದುವರಿಯಲಿದೆ. ಇಂದು ಸಂಜೆ ಹಿಂದುಳಿದ ಸಮುದಾಯದವರ ಸಭೆ ನಡೆಯಲಿದ್ದು, ಅವರು ಸೂಕ್ತ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ ಎಂದರು.

ಎರಡು ನಿಗಮಗಳ ಆಧ್ಯಕ್ಷ ಸ್ಥಾನ ಕುರಿತಂತೆ ಕುಮಾರಸ್ವಾಮಿ ನನ್ನ ಸಲಹೆ ಕೇಳಿದ್ದಾರೆ. ಒಂದು ಸಚಿವ ಸ್ಥಾನ ಬಿಟ್ಟುಕೊಟ್ಟಿದ್ದೇವೆ, ನಿಗಮದ ಅಧ್ಯಸ್ಥ ಸ್ಥಾನವನ್ನೂ ಬಿಟ್ಟುಕೊಡಲು ಸೂಚಿಸಿದೆ ಎಂದರು. ಮುಸ್ಲಿಂ ಸಮುದಾಯದವರಿಗೆ ಸಚಿವ ಸ್ಥಾನ ನೀಡಿಲ್ಲ ಎಂಬ ಆರೋಪದ ಬಗ್ಗೆ ಪ್ರಸ್ತಾಪಿಸಿ, ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಶೇ 40ರಷ್ಟು ಮುಸ್ಲಿಮರು ಪಕ್ಷದಿಂದ ಆರಿಸಿ ಬಂದಿರುವುದು ಆ ಸಮುದಾಯದವರಿಗೆ ಗೊತ್ತಿದೆ ಎಂದರು.

‘ಒಂದು ದೇಶ ಒಂದು ಚುನಾವಣೆ’ ಕುರಿತಂತೆ ಸಣ್ಣ ಪಕ್ಷಗಳುತಪ್ಪು ದಾರಿ ತಪ್ಪುವಅಪಾಯ ಇದೆ. ಮೇಲಾಗಿ ಪಕ್ಷಗಳಲ್ಲಿ ದ್ವಂದ್ವ ನಿಲುವು ಇದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.