ADVERTISEMENT

ಗೋಹತ್ಯೆ ನಿಷೇಧ ಕಾಯ್ದೆ ವಾಪಸ್‌ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ: ಸಚಿವ ಎಚ್.ಕೆ ಪಾಟೀಲ್

​ಪ್ರಜಾವಾಣಿ ವಾರ್ತೆ
Published 6 ಜೂನ್ 2023, 20:22 IST
Last Updated 6 ಜೂನ್ 2023, 20:22 IST
ಎಚ್‌.ಕೆ ಪಾಟೀಲ
ಎಚ್‌.ಕೆ ಪಾಟೀಲ   

ಬೆಂಗಳೂರು: ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಜಾನುವಾರು ಹತ್ಯೆ ಪ್ರತಿಬಂಧಕ (ಗೋಹತ್ಯೆ ನಿಷೇಧ) ಕಾಯ್ದೆ ವಾಪಸ್ ಪಡೆಯುವ ಕುರಿತ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ‌ಸ್ಪಷ್ಟಪಡಿಸಿದರು.

ಸುದ್ದಿಗಾರರ ಪ್ರಶ್ನೆಗೆ ಮಂಗಳವಾರ ಪ್ರತಿಕ್ರಿಯಿಸಿದ ಅವರು, ‘ಆ ರೀತಿಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲದೇ ಇರುವಾಗ ಆ ಕುರಿತು ಟಿಪ್ಪಣಿ ಅಥವಾ ಚರ್ಚಿಸುವುದು ಸಮಂಜಸವಲ್ಲ’ ಎಂದರು.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಗೆ ಕೆಲವೊಂದು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿ ನಡುವೆ ರಾಜಕೀಯ ಸಂಘರ್ಷಕ್ಕೆ ಕಾರಣವಾದ ಬೆನ್ನಲ್ಲೆ ಪಾಟೀಲರು ಈ ಹೇಳಿಕೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.