ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಅವರ ಜತೆಮಾತುಕತೆ ನಡೆಸಿಲ್ಲ ಎಂದು ಬಿಜೆಪಿಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.
ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬಮಾಧ್ಯಮ ವರದಿಗಳಿಗೆ ಪ್ರತಿಕ್ರಿಯೆ ನೀಡಿರುವ ಉಮೇಶ್ ಕತ್ತಿ, ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ, ಅವರೊಂದಿಗೆ ಮಾತುಕತೆ ನಡೆಸಿಲ್ಲ ಎಂದು ಹೇಳಿದ್ದಾರೆ.
ನನಗೆ ಸಚಿವ ಸ್ಥಾನ ನೀಡುವುದು ಬಿಡುವುದು ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಹೈಕಮಾಂಡ್ಗೆ ಬಿಟ್ಟ ವಿಚಾರವಾಗಿದೆ. ನಾನು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ನನ್ನ ವಿರುದ್ದ ಕೇವಲ ಊಹಾಪೋಹದ ಸುದ್ದಿಗಳು ಸೃಷ್ಟಿಯಾಗುತ್ತಿವೆ ಎಂದು ಕತ್ತಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.