ADVERTISEMENT

ಆಕ್ಷೇಪಾರ್ಹ ಹೇಳಿಕೆ | ಯತ್ನಾಳಗೆ ಜಾಮೀನು ರಹಿತ ವಾರಂಟ್‌

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 15:35 IST
Last Updated 16 ಅಕ್ಟೋಬರ್ 2024, 15:35 IST
<div class="paragraphs"><p>ಬಸನಗೌಡ ಪಾಟೀಲ ಯತ್ನಾಳ</p></div>

ಬಸನಗೌಡ ಪಾಟೀಲ ಯತ್ನಾಳ

   

ಬೆಂಗಳೂರು: ‘ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ’ ಎಂಬ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್‌ ಹೊರಡಿಸಿದೆ.

ಈ ಕುರಿತಂತೆ ಸಚಿವ ದಿನೇಶ್‌ ಗುಂಡೂರಾವ್‌ ಪತ್ನಿ ತಬಸ್ಸುಮ್‌ ದಿನೇಶ್‌ ರಾವ್‌ ದಾಖಲಿಸಿರುವ ಮಾನಹಾನಿ ಪ್ರಕರಣ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ.ಎನ್.ಶಿವಕುಮಾರ್‌ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು. ಆದರೆ, ಆರೋಪಿ ಯತ್ನಾಳ ಅವರು ಹಾಜರಾಗಿರಲಿಲ್ಲ.

ADVERTISEMENT

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಆರೋಪಿಗೆ ಜಾಮೀನು ರಹಿತ ವಾರಂಟ್‌ ಹೊರಡಿಸಿ ಆದೇಶಿಸಿದರು. ವಿಚಾರಣೆಯನ್ನು ಇದೇ 28ಕ್ಕೆ ಮುಂದೂಡಲಾಗಿದೆ. ಅರ್ಜಿದಾರರ ಪರ ಹೈಕೋರ್ಟ್‌ ವಕೀಲ ಸೂರ್ಯ ಮುಕುಂದರಾಜ್‌ ಹಾಜರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.