ಬೆಂಗಳೂರು: ಕೊರೊನಾ ವೈರಸ್ ರೂಪಾಂತರ ತಳಿ ಓಮೈಕ್ರಾನ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಡಿಸೆಂಬರ್ 28ರಿಂದ ರಾಜ್ಯದಾದ್ಯಂತ ಮತ್ತೆ ರಾತ್ರಿ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.
ಸೋಂಕು ತಡೆಗೆ ತೆಗೆದುಕೊಂಡಿರುವ ಕ್ರಮಗಳು ಮತ್ತು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉನ್ನತಮಟ್ಟದ ಸಭೆ ನಡೆಸಿದರು.
ಡಿಸೆಂಬರ್ 28ರಿಂದ ಹತ್ತು ದಿನಗಳು ರಾತ್ರಿ ಕರ್ಫ್ಯೂ ಜಾರಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೂ ಕರ್ಫ್ಯೂ ಇರಲಿದೆ.
ರೆಸ್ಟೊರೆಂಟ್, ಬಾರ್, ಕ್ಲಬ್ ಹಾಗೂ ಪಬ್‌ಗಳಲ್ಲಿ ಒಟ್ಟು ಆಸನಗಳ ಪೈಕಿ ಶೇಕಡ 50 ಜನರ ಪ್ರವೇಶದ ಮಿತಿ ವಿಧಿಸಲಾಗಿದೆ.
'ಹೊಸ ವರ್ಷಕ್ಕೆ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗವಾಗಿ ನಡೆಸುವ ಸಂಭ್ರಮಾಚರಣೆ, ಸಮಾರಂಭಗಳನ್ನು ನಿಷೇಧಿಸಲಾಗಿದೆ' ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಮಾಹಿತಿ ನೀಡಿದರು.
ಮುಖ್ಯಮಂತ್ರಿಯ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಂದಾಯ ಸಚಿವ ಆರ್.ಅಶೋಕ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.